ADVERTISEMENT

ಕಲಬುರಗಿ: ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 3:29 IST
Last Updated 23 ಜೂನ್ 2024, 3:29 IST
<div class="paragraphs"><p>ದೊಡ್ಡೇಶ್</p></div>

ದೊಡ್ಡೇಶ್

   

ಕಲಬುರಗಿ: ನಗರ ಹೊರವಲಯದ ಉದನೂರ ರಸ್ತೆಯ ಜಮೀನಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಚಿತ್ತಾಪುರ ತಾಲ್ಲೂಕಿನ ಮಾಡಬೂಳ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ದೊಡ್ಡೇಶ್ (40) ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ದೊಡ್ಡೇಶ್ ಅವರು ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.