ಕಲಬುರಗಿ: ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಕಲಬುರಗಿ ಜಿಲ್ಲೆ 29ನೇ ಸ್ಥಾನ ಪಡೆದಿದೆ.
ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಸೇರಿ 32,197 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇ 69.37ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.
ಕಳೆದ ವರ್ಷದ ದ್ವಿತೀಯ ಪಿಯು ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯು 27ನೇ ಸ್ಥಾನ ಗಳಿಸಿತ್ತು. ಪರೀಕ್ಷೆ ಬರೆದಿದ್ದ 29,449 ವಿದ್ಯಾರ್ಥಿಗಳ ಪೈಕಿ 15,769 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. ಶೇ 59.17ರಷ್ಟು ಫಲಿತಾಂಶ ದಾಖಲಾಗಿತ್ತು.
2021ರಲ್ಲಿ ಕೋವಿಡ್ ಕಾರಣ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಅದೇ ವಿದ್ಯಾರ್ಥಿಗಳ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.