ADVERTISEMENT

ಆಗಸ್ಟ್‌ನಲ್ಲಿ ಕಲಬುರಗಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಗುರುಬಸಪ್ಪ ಸಜ್ಜನಶೆಟ್ಟಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 14:01 IST
Last Updated 22 ಜುಲೈ 2024, 14:01 IST
<div class="paragraphs"><p>ಗುರುಬಸಪ್ಪ ಸಜ್ಜನಶೆಟ್ಟಿ</p></div>

ಗುರುಬಸಪ್ಪ ಸಜ್ಜನಶೆಟ್ಟಿ

   

ಕಲಬುರಗಿ: ಆಗಸ್ಟ್‌ ತಿಂಗಳಲ್ಲಿ ಕಲಬುರಗಿ ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಭವನದಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ತಿಳಿಸಿದ್ದಾರೆ.

ವೈವಿಧ್ಯಮಯ ಗೋಷ್ಠಿ ಒಳಗೊಂಡ ಒಂದು ದಿನದ ಸಮ್ಮೇಳನ ಆಯೋಜಿಸಿ ಕಲೆ, ಸಾಹಿತ್ಯ, ಸಂಗೀತ, ಪರಂಪರೆಗಳ ಕುರಿತಾದ ಅನೇಕ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಲಾಗುವುದು. ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳ ಬದುಕು-ಬರಹ ಮತ್ತು ಸಾಧನೆಗಳ ಕುರಿತಾದ ಪುಸ್ತಕವನ್ನು ಪ್ರಕಟಿಸಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದಿದ್ದಾರೆ.

ADVERTISEMENT

ಸಮ್ಮೇಳನದ ಯಶಸ್ಸಿಗೆ ಪೂರಕವಾಗಿ ಸ್ವಾಗತ ಸಮಿತಿ ಮತ್ತು ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ಸಮ್ಮೇಳನವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಜ್ಜನಶೆಟ್ಟಿ ಸಭೆಗೆ ಮಾಹಿತಿ ನೀಡಿದರು.

ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ವಿಶ್ವನಾಥ ಸಿ.ಯನಗುಂಟಿ, ವಿಶಾಲಾಕ್ಷಿ ಮಾಯಣ್ಣವರ, ಕೋಶಾಧ್ಯಕ್ಷ ಕುಪೇಂದ್ರ ಬರಗಾಲಿ, ಪ್ರಮುಖರಾದ ಮಲ್ಲಿಕಾರ್ಜುನ ಇಬ್ರಾಹಿಂಪುರ, ಭಾಗ್ಯಶ್ರೀ ಮರಗೋಳ, ಕವಿತಾ ಕವಳೆ, ಶರಣಕುಮಾರ ಎಂ.ಹಾಗರಗುಂಡಗಿ, ವಿಜಯಕುಮಾರ ಹಾಬಾನೂರ, ರೇವಯ್ಯಸ್ವಾಮಿ ಸರಡಗಿ, ರೇವಣಸಿದ್ದಪ್ಪ ಗುಂಡಗುರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.