ADVERTISEMENT

ಲಂಚಕ್ಕೆ ಬೇಡಿಕೆ: ಅಫಜಲಪುರ ಬಿಇಒ ದೇಶಮುಖ ಎಸಿಬಿ ಬಲೆಗೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 16:20 IST
Last Updated 14 ಜೂನ್ 2022, 16:20 IST
ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ದೇಶಮುಖ
ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ದೇಶಮುಖ   

ಕಲಬುರಗಿ: ಅನುದಾನಿತ ಶಾಲೆಯೊಂದರ ಶಿಕ್ಷಕರಿಗೆ ಬಾಕಿ ವೇತನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು ನಗರದ ಹೋಟೆಲ್ ಬಳಿ ₹15 ಸಾವಿರ ಹಣ ಪಡೆಯುತ್ತಿದ್ದ ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ದೇಶಮುಖ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾ‍ಪುರದ ವಿಠ್ಠಲ ಹೇರೂರ ಅನುದಾನಿತ ಶಾಲೆಯ ಶಿಕ್ಷಕರ ಬಾಕಿ ವೇತನ ₹6 ಲಕ್ಷ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ ಖಿಲಾರಿ ಅವರು ಹಣವನ್ನು ಬಿಇಒಗೆ ನೀಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಬಿಇಒ ಅವರನ್ನು ಬಂಧಿಸಿದರು.

ಜೂನ್ 1ರಂದು ತನ್ನ ಅಧೀನ ಸಿಬ್ಬಂದಿ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ಪೊಲೀಸ್ ಕಮಿಷನರ್ ಶಂಕರ‍ಪ್ಪ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.