ADVERTISEMENT

ಬೆಲೆ ಏರಿಕೆ ವಿರುದ್ಧ ಜನರ ಅಸಮಾಧಾನ: ಮಹಾಂತೇಶ ಹಟ್ಟಿ

​ಪ್ರಜಾವಾಣಿ ವಾರ್ತೆ
Published 7 ಮೇ 2023, 4:02 IST
Last Updated 7 ಮೇ 2023, 4:02 IST
ಮಹಾಂತೇಶ ಹಟ್ಟಿ
ಮಹಾಂತೇಶ ಹಟ್ಟಿ   

ಕಲಬುರಗಿ: ‘ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ, ರಾಜ್ಯ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತು ಜನ ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಬೆಲೆ ಏರಿಕೆಯಿಂದ ಜನರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ 371 (ಜೆ) ಮೀಸಲಾತಿ ನೀಡಿ ಈ ಭಾಗದ ಜನರ ಜೀವನಮಟ್ಟ ಸುಧಾರಣೆಗೆ ಮುಂದಾಗಿದೆ. ಆದರೆ ಈಗಿನ ಸರ್ಕಾರ ಸಮರ್ಪಕವಾಗಿ ಅನುದಾನ ನೀಡಿ ಅನುಷ್ಠಾನಕ್ಕೆ ಮುಂದಾಗಿಲ್ಲ’ ಎಂದು ದೂರಿದರು.

‘ಕಳೆದ ಕಾಂಗ್ರೆಸ್‌ನ ಅವಧಿಯ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 158 ಭರವಸೆಗಳ ಪೈಕಿ 152 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಪಶುಭಾಗ್ಯ, ಶೂ ಭಾಗ್ಯ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ನೆರವಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಗೆಲುವು ಶತಸಿದ್ಧ’ ಎಂದು ಅವರು ಹೇಳಿದರು.

ADVERTISEMENT

ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್‌ ಜಿರನಾಳಕರ್ ಮಾತನಾಡಿ,‘ಬಿಜೆಪಿ ನಾಯಕರು ಭಾವನಾತ್ಮಕ ವಿಚಾರವನ್ನು ಮುನ್ನೆಲೆಗೆ ತಂದು ಮತಪಡೆಯಲು ಯತ್ನಿಸು ತ್ತಿದ್ದಾರೆ. ಕೋಮುವಾದವನ್ನು ಬೆಂ ಬಲಿಸಿ ಸಮಾಜದ ನಡುವೆ ಒಡಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

ರುದ್ರೇಶ ದೊಡ್ಡಮನಿ, ಅನಿಲ ಮಾಗಣಗೇರಿ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.