ADVERTISEMENT

ಕೆಇಎ ಪರೀಕ್ಷೆ: ಮೂವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 22:42 IST
Last Updated 26 ಜನವರಿ 2024, 22:42 IST
ಕೆಇಎ
ಕೆಇಎ   

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನಿಗಮ ಮಂಡಳಿಗಳಲ್ಲಿನ ಹುದ್ದೆಗಳಿಗೆ ಅಕ್ಟೋಬರ್‌ನಲ್ಲಿ ನಡೆಸಿದ್ದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ್ದ ಪ್ರಕರಣ ಕುರಿತು ಸಿಐಡಿ ಅಧಿಕಾರಿಗಳು 370 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಮೂರನೇ ಜೆಎಂಎಫ್‌ಸಿ ಕೋರ್ಟ್‌ಗೆ ಸಲ್ಲಿಸಿದ್ದು, ಆರೋಪಿಗಳಾದ ಲಕ್ಷ್ಮಿಪುತ್ರ ತಳವಾರ, ಶೈಲಶ್ರೀ ಹಾಗೂ ಗಂಗಾಧರ್ ಅವರ ವಿರುದ್ಧ ದೋಷಾರೋಪ ಹೊರಿಸಲಾಗಿದೆ. ಇಲ್ಲಿನ ವಿ.ವಿ. ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸಿತ್ತು.

ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ವಿಚಾರಣೆ ಬಾಕಿ ಇರುವುದರಿಂದ ಸದ್ಯಕ್ಕೆ ಪಾಟೀಲ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿಲ್ಲ ಎಂದು ಸಿಐಡಿ ಮೂಲಗಳು ತಿಳಿಸಿವೆ. ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ, ಯಾದಗಿರಿಯಲ್ಲಿಯೂ ಈ ಅಕ್ರಮಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.