ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ ಘಟನೆ ಸೋಮವಾರ ನಡೆದಿದೆ. ಬೆಳಿಗ್ಗೆ 4 ಗಂಟೆಗೆ ಮಗು ಜನಿಸಿತ್ತು.
ಚಿಂಚೋಳಿ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಅಪರಿಚಿತ ಮಹಿಳೆಯರು ಶುಶ್ರೂಷಕಿಯರ ಸೋಗಿನಲ್ಲಿ ಕಸ್ತೂರಿ ಅವರಿದ್ದ ವಾರ್ಡ್‌ಗೆ ಬಂದರು. ಮಗುವಿಗೆ ಇಂಜೆಕ್ಷನ್ ಮಾಡಿಸಬೇಕಿದೆ ಎಂದು ತಾಯಿ ಹಾಗೂ ಮಗುವನ್ನು ಕರೆದೊಯ್ದರು. ಮಾರ್ಗ ಮಧ್ಯದಲ್ಲಿ ಮಗುವಿನ ರಿಪೋರ್ಟ್ ತರುವಂತೆ ತಾಯಿಗೆ ಹೇಳಿ, ಮಗುವನ್ನು ಎತ್ತಿಕೊಂಡರು. ರಿಪೋರ್ಟ್ ತರುವಷ್ಟರಲ್ಲಿ ಮಗುವಿನ್ನೊಂದಿಗೆ ಇಬ್ಬರೂ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ಪರಿಶೀಲನೆ: ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಪರಿಶೀಲಿಸಿದಾಗ ಇಬ್ಬರು ಅಪರಿಚಿತ ಮಹಿಳೆಯರು ತಮ್ಮ ಬಟ್ಟೆ ಬದಲಾಯಿಸಿ ಮಗುವನ್ನು ಎತ್ತಿಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.