ADVERTISEMENT

ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಎಂ.ವೈ. ಪಾಟೀಲ ನೇಮಕ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 15:40 IST
Last Updated 15 ಮಾರ್ಚ್ 2024, 15:40 IST
<div class="paragraphs"><p>ಎಂ.ವೈ. ಪಾಟೀಲ </p></div>

ಎಂ.ವೈ. ಪಾಟೀಲ

   

ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ನೆರೆಯ ವಿಜಯಪುರ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರನ್ನು ನೇಮಕ ಮಾಡಿ ಶುಕ್ರವಾರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಆ ಮೂಲಕ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಕಲಬುರಗಿ ಜಿಲ್ಲೆಗೆ ಸಿಂಹ ಪಾಲು ದೊರೆತಂತಾಗಿದೆ.

ADVERTISEMENT

ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರಾದರೂ ಸಂಪುಟದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಸರ್ಕಾರ ರಚನೆಯಾಗಿ 9 ತಿಂಗಳಾದ ಬಳಿಕ ಕೆಕೆಆರ್‌ಟಿಸಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಧ್ಯಕ್ಷರಾಗಿದ್ದರು.

ಜಿಲ್ಲೆಯ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ ಅವರು ಸಚಿವರಾಗಿದ್ದರೆ, ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅವರು ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದಾರೆ. ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷರಾಗಿದ್ದರೆ ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಅವರನ್ನು ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿ.ಆರ್. ಪಾಟೀಲ, ಅಜಯ್ ಸಿಂಗ್, ಕನೀಜ್ ಫಾತಿಮಾ ಅವರಿಗೆ ಸಚಿವ ಸಂಪುಟದ ಸ್ಥಾನಮಾನ ನೀಡಲಾಗಿದೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೊರತುಪಡಿಸಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರಿಗೂ ಸ್ಥಾನಮಾನ ನೀಡಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.