ADVERTISEMENT

3 ವರ್ಷ ಕಳೆದರೂ ಪೂರ್ಣಗೊಳ್ಳದ ಗ್ರಂಥಾಲಯ ಕಟ್ಟಡ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 16:03 IST
Last Updated 3 ಜುಲೈ 2024, 16:03 IST
<div class="paragraphs"><p>ಚಿಂಚೋಳಿ ತಾಲ್ಲೂಕಿನ ವೆಂಕಟಾಪುರದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ ಅಪೂರ್ಣವಾಗಿದೆ</p></div>

ಚಿಂಚೋಳಿ ತಾಲ್ಲೂಕಿನ ವೆಂಕಟಾಪುರದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ ಅಪೂರ್ಣವಾಗಿದೆ

   

ಚಿಂಚೋಳಿ: ತೆಲಂಗಾಣ ಗಡಿಗೆ ಹೊಂದಿಕೊಂಡ ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ 3 ವರ್ಷ ಕಳೆದರೂ ಪೂರ್ಣಗೊಂಡಿಲ್ಲ ಇದರಿಂದ ಕಟ್ಟಡ ಬಳಕೆಯಿಲ್ಲದೇ ಹಾಳಾಗುತ್ತಿದೆ ಎಂದು ಗ್ರಾ.ಪಂ. ಸದಸ್ಯೆ ಗೌರಮ್ಮ ಬೆಟ್ಟಯ್ಯ ಭಜಂತ್ರಿ ದೂರಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಎದುರುಗಡೆ ಅಂದಾಜು ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡ ಕಿಟಕಿ, ಬಾಗಿಲು ಅಳವಡಿಸಿಲ್ಲ. ಶೌಚಾಲಯ ನಿರ್ಮಾಣ ಬಾಕಿಯಿದೆ ಇದರಿಂದ ಬಳಕೆಯಾದ ಈ ಕಟ್ಟಡ ಈಗ ಹಾಳಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಸಂಬಂಧಿಸಿದ ಅಧಿಕಾರಿಗಳು ಗ್ರಾ.ಪಂ. ಗ್ರಂಥಾಲಯ ಕಟ್ಟಡ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಗಡಿಭಾಗದ ಜನರಿಗೆ ಗ್ರಂಥಾಲಯದ ಪ್ರಯೋಜನ ದೊರೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.