ADVERTISEMENT

ಪಡಿತರ ಅಕ್ಕಿ ನಾಪತ್ತೆ ಪ್ರಕರಣ: ಮಣಿಕಂಠ ರಾಠೋಡ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 6:07 IST
Last Updated 26 ಜುಲೈ 2024, 6:07 IST
<div class="paragraphs"><p>ಮಣಿಕಂಠ ರಾಠೋಡ</p></div>

ಮಣಿಕಂಠ ರಾಠೋಡ

   

ಶಹಾಪುರ: ಇಲ್ಲಿನ ಟಿಎಪಿಸಿಎಂಎಸ್‌ನಲ್ಲಿ ₹ 2.6 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಣಿಕಂಠ ರಾಠೋಡ ಅವರನ್ನು ಗುರುವಾರದಿಂದ ಜು.29ರವರೆಗೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶೋಭಾ ಅವರು ನಿರ್ದೇಶನ ನೀಡಿದ್ದಾರೆ.

ಅಕ್ಕಿ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಜಾವೇದ ಇನಾಂದಾರ ಅವರು ಎಪಿಪಿ ಅವರ ಮೂಲಕ ಅರ್ಜಿ ಸಲ್ಲಿಸಿದ್ದರು. ಮಣಿಕಂಠ ರಾಠೋಡ ಅವರಿಂದ ಪ್ರಕರಣದಲ್ಲಿ ಸರ್ಕಾರಕ್ಕೆ ಉಂಟಾದ ನಷ್ಟದ ಜಪ್ತಿ ಮಾಡಿಕೊಳ್ಳುವುದು. 13 ಖಾತೆಗಳನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳುವುದು. ಅಕ್ರಮವಾಗಿ ಅಕ್ಕಿ ಸಾಗಣೆ ಮಾಡಲು ಉಪಯೋಗಿಸಿದ ವಾಹನಗಳನ್ನು ಜಪ್ತಿ ಮಾಡಿಕೊಳ್ಳುವುದು ಬಾಕಿ ಇದೆ. ಮಣಿಕಂಠ ಕೃತ್ಯಕ್ಕೆ ಬಳಸಿದ ಫೋನ್ ಜಪ್ತಿ ಮಾಡಿಕೊಳ್ಳುವುದು ಬಾಕಿ ಇದೆ ಎಂದು ಅರ್ಜಿಯಲ್ಲಿ ತಿಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.