ADVERTISEMENT

22ರಂದು ಸಚಿವ ಪ್ರಿಯಾಂಕ್‌ ಖರ್ಗೆ ಕಲಬುರಗಿಗೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:20 IST
Last Updated 19 ಜೂನ್ 2024, 16:20 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದೇ 22ರಂದು ಬೆಳಿಗ್ಗೆ 9.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡುವರು. 23ರಂದು ಬೆಳಿಗ್ಗೆ 9.45ಕ್ಕೆ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT