ಕಲಬುರಗಿ: ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರೆ ಚುನಾವಣೆ ಮತ್ತು ವೈಯಕ್ತಿಕ ಖರ್ಚು ನೋಡಿಕೊಳ್ಳುತ್ತೇವೆ. ಮುಂದೆ ಅಧಿಕಾರಕ್ಕೆ ಬಂದರೆ ಮಂತ್ರಿಯನ್ನೂ ಮಾಡುವುದಾಗಿ ಬಿಜೆಪಿಯ ಜವಾಬ್ದಾರಿಯುತ ವ್ಯಕ್ತಿಯೊಬ್ಬರು ಆಮಿಷಯೊಡ್ಡಿದ್ದರು’ ಎಂದು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ, ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದರು.
‘ಕಾಂಗ್ರೆಸ್ ಶಾಸಕರಿಗೆ ಬಿಜೆಪಿಗೆ ಸೇರಲು ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಆರೋಪಿಸಿದ್ದ ಬೆನ್ನಲ್ಲೇ ಇದೀಗ ಬಿ.ಆರ್. ಪಾಟೀಲ ಅವರೂ ಇದಕ್ಕೆ ಧ್ವನಿಗೂಡಿಸಿದ್ದಾರೆ.
ಇಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎರಡು ತಿಂಗಳ ಹಿಂದೆ ಬಿಜೆಪಿಯ ಜವಾಬ್ದಾರಿಯುತ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ನಲ್ಲಿ ನಿಮಗೆ ಅನ್ಯಾಯವಾಗುತ್ತಿದೆ. ಅಲ್ಲಿಂದ ಹೊರ ಬನ್ನಿ. ಚುನಾವಣೆಯ ಖರ್ಚು ನೋಡಿಕೊಳ್ಳುತ್ತೇವೆ ಎಂದಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.