ADVERTISEMENT

ಮಾರುತಿ ಮಾನ್ಪಡೆ ಸಾವು: ಸದಾನಂದಗೌಡ ಹೇಳಿಕೆಗೆ ಪ್ರಿಯಾಂಕ ಖರ್ಗೆ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 8:13 IST
Last Updated 28 ಅಕ್ಟೋಬರ್ 2020, 8:13 IST
ಪ್ರಿಯಾಂಕ ಖರ್ಗೆ
ಪ್ರಿಯಾಂಕ ಖರ್ಗೆ    

ಕಲಬುರ್ಗಿ: ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ‌ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕರಾದ ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಅಸಮಧಾನ ಹೊರಹಾಕಿರುವ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ಧ ಮಾನ್ಪಡೆಯವರು ಹೋರಾಡುತ್ತಲೇ ಬಂದಿದ್ದರು. ಆದರೆ ಮಾನ್ಪಡೆ ಸಾವಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಕಾರಣ ಎಂಬ ಆರೋಪ ಸದಾನಂದಗೌಡರ ಮನಸ್ಥಿತಿ ತೋರಿಸುತ್ತದೆ’ ಎಂದಿದ್ದಾರೆ.

‘ಕೊರೊನಾ‌ದಂತ ಸಾಂಕ್ರಾಮಿಕ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರ್ಕಾರದ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ ಈಗ ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು’ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ‌ ಸರಕಾರ‌ ಕೊಡುಗೆ ಏನು? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡವರನ್ನು ಶ್ರೀ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.