ಕಲಬುರ್ಗಿ: ಎದೆ ನೋವಿನ ಕಾರಣಕ್ಕಾಗಿ ಸಂಸದ ಡಾ.ಉಮೇಶ ಜಾಧವ ಅವರು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಕೋವಿಡ್–19ನಿಂದ ಚೇತರಿಸಿಕೊಂಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ಡಾ.ಜಾಧವ, ‘ಬೆಳಿಗ್ಗೆ ಸಣ್ಣ ಪ್ರಮಾಣದ ಎದೆ ನೋವು ಬಂದಿದ್ದರಿಂದ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದೆ. ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ ಅವರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಯಾರೂ ಗಾಬರಿಯಾಗುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.