ಕಲಬುರಗಿ: ಇಲ್ಲಿನ ಟಿಪ್ಪು ಸುಲ್ತಾನ್ ನಗರದಲ್ಲಿ ಗುರುವಾರ ಬೆಳಿಗ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜಿಲ್ಲಾ ಘಟಕದ ಅಧ್ಯಕ್ಷ ಏಜಾಜ್ ಅಲಿ ಮತ್ತು ರಾಜ್ಯ ಘಟಕದ ಖಜಾಂಚಿ ಶಾಹೀದ್ ನಾಸಿರ್ ಮನೆ ಮತ್ತು ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ನಸುಕಿನ ಜಾವ ದಾಳಿ ನಡೆಸಿದರು.
ಏಜಾಜ್ ಅಲಿಗೆ ಅಧಿಕಾರಿಗಳು ವಶಕ್ಕೆ ಪಡೆದರು. ಶಾಹೀದ್ ನಾಸಿರ್ ಪರಾರಿಯಾಗಿದ್ದು, ಶೋಧ ಮುಂದುವರೆದಿದೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಜಾಜ್ ಮನೆಯಲ್ಲಿ ₹ 14 ಲಕ್ಷ ಸಿಕ್ಕಿದ್ದು, ವಶಪಡಿಸಿಕೊಳ್ಳಲಾಗಿದೆ.
ಬಂಧನ ಖಂಡಿಸಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಸರ್ಕಾರ ಮತ್ತು ಎನ್ಐಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.