ADVERTISEMENT

ಕಲಬುರಗಿ ಜೈಲಿನಲ್ಲಿ ಕೈದಿಗಳಿಂದ ವಿಡಿಯೊ ಕಾಲ್: ಫೋಟೊ, ವಿಡಿಯೊ ಬಹಿರಂಗ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 8:17 IST
Last Updated 14 ಅಕ್ಟೋಬರ್ 2024, 8:17 IST
<div class="paragraphs"><p>ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೂವರು ಕೈದಿಗಳು ಸ್ಮಾರ್ಟ್‌ಫೋನ್ ಬಳಸಿ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿದ್ದಾರೆ ಎನ್ನಲಾದ ದೃಶ್ಯ</p></div>

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೂವರು ಕೈದಿಗಳು ಸ್ಮಾರ್ಟ್‌ಫೋನ್ ಬಳಸಿ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿದ್ದಾರೆ ಎನ್ನಲಾದ ದೃಶ್ಯ

   

ಕಲಬುರಗಿ: ನಗರದ ಹೊರವಲಯದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೂವರು ಕೈದಿಗಳು ಸ್ಮಾರ್ಟ್‌ಫೋನ್ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ ಕುಳಿತು ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ, ಗಾಂಜಾ ಸೇದುತ್ತಿದ್ದಾರೆ ಎನ್ನಲಾದ ದೃಶ್ಯಗಳು ಬಹಿರಂಗವಾಗಿವೆ.

ADVERTISEMENT

ಈ ಮೂವರು ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ಇರುವ ಕೆಲ ಕೈದಿಗಳು ಐಷರಾಮಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಕಳೆದ ತಿಂಗಳು ಜೈಲಿನಲ್ಲಿ ಗಾಂಜಾ ಸಾಗಣೆ ಮಾಡಿದ ಆರೋಪದಡಿ ಜೈಲಿನ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರನ್ನು ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದರು. ಈಗ ಕೈದಿಗಳು ಜೈಲಿನಲ್ಲಿಯೇ ಗಾಂಜಾ ಸೇದುತ್ತಾ, ಫೋನ್‌ನಲ್ಲಿ ಮಾತನಾಡಿದ್ದಾರೆ ಎನ್ನಲಾದ ದೃಶ್ಯಗಳು ಹರಿದಾಡುತ್ತಿವೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್‌ ಮ್ಯಾನೇಜರ್ ನಾಗರಾಜ್‌ನನ್ನು ಕಲಬುರಗಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಈಗ ಕಲಬುರಗಿ ಜೈಲಿನಲ್ಲಿಯೂ ಕೆಲವು ಕೈದಿಗಳಿಗೆ ಐಷರಾಮಿ ಸೌಲಭ್ಯ ಕಲ್ಪಿಸುತ್ತಿರುವ ಆಪಾದನೆ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆಗೆ ಕಾರಾಗೃಹದ ಅಧಿಕಾರಿಗಳು ಸಿಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.