ADVERTISEMENT

ಜೂ.24ರಂದು ಅಫಜಲಪುರ ತಹಶೀಲ್ದಾರ್ ಕಚೇರಿ ಸ್ಥಳಾಂತರ ವಿರೋಧಿಸಿ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 14:30 IST
Last Updated 22 ಜೂನ್ 2024, 14:30 IST
ಈರಣ್ಣ ಪಂಚಾಳ
ಈರಣ್ಣ ಪಂಚಾಳ   

ಅಫಜಲಪುರ: ‘ಪಟ್ಟಣದ ತಹಶಿಲ್ದಾರ್ ಕಚೇರಿ ಸ್ಥಳಾಂತರಕ್ಕೆ ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ವಿರೋಧಿಸಿ ತಾಲ್ಲೂಕಿನ ರೈತರು, ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಜೂ.24ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಸತ್ಯಾಗ್ರಹ ಕೈಗೊಳ್ಳಲಾಗಿದೆ’ ಎಂದು ಸಾಮಾಜಿಕ ಹೋರಾಟಗಾರ ಈರಣ್ಣ ಪಂಚಾಳ ತಿಳಿಸಿದರು.

ಈ ಬಗ್ಗೆ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಒಂದು ಹಂತದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಕೂಗು ಸರ್ಕಾರಕ್ಕೆ ಮುಟ್ಟಿಸಬೇಕೆಂದು ದೃಢ ನಿರ್ಧಾರ ತೆಗೆದುಕೊಂಡು ಬೃಹತ್ ಸತ್ಯಾಗ್ರಹ  ಕೈಗೊಳ್ಳಲಾಗಿದೆ. ಜನರು ತಮ್ಮ ಕೆಲಸಕ್ಕಾಗಿ 4 ಕಿ.ಮೀ ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗುವುದಕ್ಕಿಂತ ಮುಂಚೆ ನಾವೆಲ್ಲರೂ ಜಾಗೃತರಾಗಬೇಕಿದೆ. ಹತ್ತಾರು ಸಮಸ್ಯೆಗಳಿಗೆ ಕಾರಣವಾಗಿರುವ ತಹಶೀಲ್ದಾರ್ ಕಚೇರಿ ಸ್ಥಳಾಂತರ ವಿರೋಧಿಸಿ ಹಮ್ಮಿಕೊಂಡಿರುವ ಸತ್ಯಾಗ್ರಹದಲ್ಲಿ ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಳ್ಳುವ ಮೂಲಕ ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT