ADVERTISEMENT

ಎರಡು ವರ್ಷದೊಳಗೆ 16 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆ ಭರ್ತಿ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 3:11 IST
Last Updated 23 ಸೆಪ್ಟೆಂಬರ್ 2019, 3:11 IST
ಕಲಬುರ್ಗಿ: ನಗರದ ಹೊರವಲಯದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ 290 ಪಿಎಸ್ಐ (ಸಿವಿಲ್), ಪಿಎಸ್ಐ (ಗುಪ್ತವಾರ್ತೆ), ಪಿಎಸ್ಐ (ಸಿಐಡಿ), ಸ್ಟೇಷನ್‌ಆರ್‌ಎಸ್ಐ ಪ್ರಶಿಕ್ಷಣಾರ್ಥಿಗಳ ಪಥಸಂಚಲನ ಸೋಮವಾರ ಬೆಳಿಗ್ಗೆ ನಡೆಯಿತು.
ಕಲಬುರ್ಗಿ: ನಗರದ ಹೊರವಲಯದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ 290 ಪಿಎಸ್ಐ (ಸಿವಿಲ್), ಪಿಎಸ್ಐ (ಗುಪ್ತವಾರ್ತೆ), ಪಿಎಸ್ಐ (ಸಿಐಡಿ), ಸ್ಟೇಷನ್‌ಆರ್‌ಎಸ್ಐ ಪ್ರಶಿಕ್ಷಣಾರ್ಥಿಗಳ ಪಥಸಂಚಲನ ಸೋಮವಾರ ಬೆಳಿಗ್ಗೆ ನಡೆಯಿತು.   

ಕಲಬುರ್ಗಿ:ಮುಂದಿನ ಎರಡು ವರ್ಷದೊಳಗೆ 16 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ಹಾಗೂ 630 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಗಾಗಲೇ 6000 ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಕುರಿತು ಹೈಕೋರ್ಟ್ ಗೂ ಮಾಹಿತಿ ಸಲ್ಲಿಸಲಾಗಿದೆಯಲ್ಲದೇ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದರು.

ಪೊಲೀಸ್ ಇಲಾಖೆ ಸುಧಾರಣೆಗೆ ದೃಢ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ಬರುವ ಬಜೆಟ್‌ದಲ್ಲಿ ಹೆಚ್ಚಿನ ಅನುದಾನ ಇಡಲಾಗುವುದು. ಪ್ರಮುಖವಾಗಿ ಸೈಬರ್ ಕ್ರೈಂ ಪಡೆಯನ್ನು ಬಲಪಡಿಸಬೇಕಾಗಿದೆ. ಇದನ್ನು ತಾಂತ್ರಿಕವಾಗಿ ಮತ್ತಷ್ಟು ಸುಧಾರಿಸಲಾಗುವುದು ಎಂದರು.

ADVERTISEMENT

ಮುಂದಿನ ಎರಡ್ಮೂರು ವರ್ಷದೊಳಗೆ ಪೊಲೀಸರ ಶೇ 60 ರಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಔರಾದಕರ್ ವರದಿ ಜಾರಿಗೆ ಸರ್ಕಾರ ಬದ್ಧ ವಿದೆ. ಈ ಕುರಿತು ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು. ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಜೈಲರ್ ಸಿಬ್ಬಂದಿಗಳನ್ನು ಹೊರಗಿಡಲಾಗಿತ್ತು. ಆದರೆ ನಾನು ಅಧಿಕಾರ ವಹಿಸಿಕೊಂಡ ಬಳಿಕ ಎರಡು ಸುತ್ತಿನ ಸಭೆ ನಡೆಸಿ ಇವರನ್ನೂ ಸೇರಿಸಲಾಗಿದೆ ಎಂದು ತಿಳಿಸಿದರು.

ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ರಾಜಕೀಯ ಗೊಂದಲ ಮೂಡಿರುವುದು ಸಹಜ. ಇದು ಯಾವ ನಿಟ್ಟಿನಲ್ಲಿ ಬಗೆಹರಿಯುತ್ತದೆ ಎಂಬುದು ನೋಡೋಣ ಎಂದರು.

ಸಂಸದ ಡಾ. ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಬಿ.ಜಿ.ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಉಪಸ್ಥಿತರಿದ್ದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪಥಸಂಚಲನ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿದರು.

ಪಿಎಸ್ಐ ಪ್ರಶಿಕ್ಷಣಾರ್ಥಿಗಳ ಪಥಸಂಚಲನ

ನಗರದ ಹೊರವಲಯದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ 290 ಪಿಎಸ್ಐ (ಸಿವಿಲ್), ಪಿಎಸ್ಐ (ಗುಪ್ತವಾರ್ತೆ), ಪಿಎಸ್ಐ (ಸಿಐಡಿ), ಸ್ಟೇಷನ್‌ಆರ್‌ಎಸ್ಐ ಪ್ರಶಿಕ್ಷಣಾರ್ಥಿಗಳ ಪಥಸಂಚಲನ ಸೋಮವಾರ ಬೆಳಿಗ್ಗೆ ನಡೆಯಿತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪಥಸಂಚಲನ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿದರು.

ಪ್ರಶಿಕ್ಷಣಾರ್ಥಿಗಳು ಶಿಸ್ತುಬದ್ಧವಾಗಿ ಹೆಜ್ಜೆಗಳನ್ನು ಹಾಕಿ ಪಥಸಂಚಲನವನ್ನು ಆಕರ್ಷಕವಾಗಿ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.