ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ಪದ್ಮಿನಿ ಕಿರಣಗಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 14:12 IST
Last Updated 30 ಜೂನ್ 2024, 14:12 IST
ಪದ್ಮಿನಿ ಕಿರಣಗಿ
ಪದ್ಮಿನಿ ಕಿರಣಗಿ   

ಕಲಬುರಗಿ: ‘ಸಬ್‌ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಒತ್ತಾಯಿಸಿದ್ದಾರೆ.

‘ಬಾಲಕಿಯನ್ನು ಗರ್ಭಿಣಿ ಮಾಡಿ ಅವಳ ಸಾವಿಗೆ ಕಾರಣನಾದ ಸರ್ಪರಾಜ್ ಮಿರ್ಜಾಗೆ ಪೋಕ್ಸೊ ಕಾಯ್ದೆ ಅಡಿ ಕಠಿಣ ಶಿಕ್ಷೆ ವಿಧಿಸುವ ಮೂಲಕ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT