ಆಳಂದ: ‘ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಹೊಂದಿಸುವ ಸಲುವಾಗಿ ಕಾಂಗ್ರೆಸ್ ಸರ್ಕಾರ ಎಸ್‌ಸಿಇಪಿ, ಟಿಎಸ್‌ಪಿ ಹಣ ದುರ್ಬಳಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಂತೋಷ ಹಾದಿಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ದುರ್ಬಳಕೆಯಾಗಿದೆ. ಮುಡಾದಲ್ಲಿ ಸ್ವತ: ಮುಖ್ಯಮಂತ್ರಿಗಳೇ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರಂಟಿಗಳಿಗಾಗಿ ₹16000 ಕೋಟಿ ಹಣವನ್ನು ದಲಿತರ ಕೋಟಾದಿಂದ ವರ್ಗಾವಣೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಕಾಂಗ್ರೆಸ್‌ನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಚಿವ ಹಾಗೂ ಶಾಸಕರು ಏನು ಮಾಡುತ್ತಿದ್ದೀರಿ?. ಅದನ್ನು ಕೇಳಲು ಧೈರ್ಯ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಮಾತೆತ್ತಿದರೆ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರುಗಳು ಹಾಗೂ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಭಾಷಣ ಮಾಡುವವರು ಈಗೇನು ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸಂವಿಧಾನಬದ್ಧವಾಗಿ ದೊರಕಬೇಕಿದ್ದ ಸೌಲಭ್ಯಗಳನ್ನು ಉದ್ದೇಶಪೂರ್ವಕವಾಗಿ ತಡೆ ಹಿಡಿಯಲಾಗುತ್ತಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.