ಕಲಬುರಗಿ: ಇತ್ತೀಚೆಗೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಆಯೋಜಿಸಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಂಘಟನೆಯ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.
ಕಾಂಗ್ರೆಸ್‌ನ ವಿವಿಧ ಜಿಲ್ಲಾ ಘಟಕಗಳು ಅಧ್ಯಕ್ಷರು ಸೂಲಿಬೆಲೆ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇವುಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸೂಲಿಬೆಲೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ನೇತೃತ್ವದ ನ್ಯಾಯಪೀಠವು, ‘ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ‘ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು ಎಫ್‌ಐಆರ್‌ಗಳಿಗೆ ತಡೆಯಾಜ್ಞೆ ನೀಡಿತು.
ಚಕ್ರವರ್ತಿ ಸೂಲಿಬೆಲೆ ಪರವಾಗಿ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.