ADVERTISEMENT

ಚಿಂಚೋಳಿ | ಸಿಎಚ್‌ಸಿಯ ‘ಡಿ’ ಗ್ರೂಪ್‌ ಉದ್ಯೋಗಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 7:01 IST
Last Updated 19 ಜೂನ್ 2024, 7:01 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಚಿಂಚೋಳಿ: ತಾಲ್ಲೂಕಿನ ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ವಸತಿ ಗೃಹದಲ್ಲಿ ‘ಡಿ’ ಗ್ರೂಪ್ ಮಹಿಳಾ ನೌಕರರೊಬ್ಬರು ಮರಣ ಪತ್ರ ಬರೆದಿಟ್ಟು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಮೂಲದ ಮಾಲಾಶ್ರಿ (29) ನೇಣು ಹಾಕಿಕೊಂಡು ಸಾವನ್ನಪ್ಪಿದವರು. ಕುಂಚಾವರಂ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಭಾಕರ ಪಾಟೀಲ, ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಬಾಲಾಜಿ ಪಾಟೀಲ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೃತರ ಪೋಷಕರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆರೋಗ್ಯ ಕೇಂದ್ರದಲ್ಲಿ ಮಾಲಾಶ್ರೀ ಕೆಲಸ ನಿರ್ವಹಿಸಿದ ಬಳಿಕ ವಸತಿ ಗೃಹಕ್ಕೆ ತೆರಳಿದರು. ವಸತಿ ಗೃಹದಲ್ಲಿ ಮರಣ ಪತ್ರ ಬರೆದಿಟ್ಟು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಮರಣ ಪತ್ರದಲ್ಲಿ ಏನಿದು ಎಂಬುದು ಬಹಿರಂಗವಾಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.