ADVERTISEMENT

ಸೈಯದ್ ಶಹಾ ಖುಸ್ರೊ ಹುಸೇನಿ ಅಂತಿಮ ದರ್ಶನ: ಖರ್ಗೆ, ಸಿದ್ದರಾಮಯ್ಯ ಸಂತಾಪ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 8:08 IST
Last Updated 7 ನವೆಂಬರ್ 2024, 8:08 IST
<div class="paragraphs"><p>ಕಲಬುರಗಿಯಲ್ಲಿ ಗುರುವಾರ ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ಅಂತಿಮ ದರ್ಶನ ಪಡೆದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ. ಕುಟುಂಬ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು</p></div>

ಕಲಬುರಗಿಯಲ್ಲಿ ಗುರುವಾರ ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ಅಂತಿಮ ದರ್ಶನ ಪಡೆದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ. ಕುಟುಂಬ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು

   

ಕಲಬುರಗಿ: ರಾಜಕೀಯ ಮುಖಂಡರು, ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು, ಮುಸ್ಲಿಂ ಸಮುದಾಯದ ಹಿರಿಯರು, ಖಾಜಾ ಬಂದಾನವಾಜ್ ದರ್ಗಾದ ಭಕ್ತ ಸಮೂಹವು ಖಾಜಾ ಬಂದಾನವಾಜ್ ದರ್ಗಾದ (ಕೆಬಿಎನ್‌) ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ಅಂತಿಮ ದರ್ಶನ ಪಡೆದರು.

ವಯೋಸಹಜ ಅನಾರೋಗ್ಯದಿಂದಾಗಿ ಸೈಯದ್ ಶಹಾ ಖುಸ್ರೊ ಹುಸೇನಿ (79) ಅವರು ಬುಧವಾರ ತಡರಾತ್ರಿ ನಿಧನರಾದರು.

ADVERTISEMENT

ಗುರುವಾರ ಬೆಳಿಗ್ಗೆ ಕೆಬಿಎನ್ ದರ್ಗಾ ಸಮೀಪದ ಮನೆಯಲ್ಲಿ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಸೇರಿದಂತೆ ಸಾವಿರಾರು ಭಕ್ತರು ತಂಡೋಪತಂಡವಾಗಿ ಬಂದು ದರ್ಶನ ಪಡೆದರು.

ಗಣ್ಯರ ಸಂತಾಪ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪ್ರಿಯಾಂಕ್ ಖರ್ಗೆ, ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

‘ಹಜರತ್ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ನಿಧನಕ್ಕೆ ನನ್ನ ಸಂತಾಪಗಳು. ಶಿಕ್ಷಣ ತಜ್ಞ, ಸೂಫಿ ವಿದ್ವಾಂಸರಾಗಿದ್ದು, ತಮ್ಮ ಇಡೀ ಜೀವನವನ್ನು ಸಮಾಜ ಕಲ್ಯಾಣ ಮತ್ತು ಮಾನವೀಯ ಕಾರ್ಯಗಳಿಗಾಗಿ ಮುಡಿಪಾಗಿಟ್ಟಿದ್ದಾರೆ. ಶಿಕ್ಷಣ, ಮಾನವತಾವಾದ ಮತ್ತು ಸೌಹಾರ್ದತೆಗೆ ತಮ್ಮದೇಯಾದ ಕೊಡುಗೆಗಳನ್ನು ನೀಡಿದ್ದಾರೆ’ ಎಂದು ಮಲ್ಲಿಕಾರ್ಜುನ ಖರ್ಗೆ ಅವರು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.

‘ಹಿರಿಯ ಧಾರ್ಮಿಕ ಮುಖಂಡರು, ಕಲಬುರಗಿಯ ಹಜ್ರತ್ ಖಾಜಾ ಬಂದಾನವಾಜ್ ದರ್ಗಾದ ಗುರುಗಳಾದ ಸೈಯದ್ ಶಾಹ ಖುಸ್ರೊ ಹುಸೇನಿ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

‘ಬಂದಾನವಾಜ ದರ್ಗಾವನ್ನು ಹಿಂದೂ - ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು ಮುನ್ನಡೆಸಿಕೊಂಡು ಬಂದವರು. ಸದಾಕಾಲ ಸಮಾಜದ ಒಳಿತನ್ನೇ ಬಯಸುತ್ತಿದ್ದ ಸಯ್ಯದ್ ಶಹಾ ಖುಸ್ರೊ ಹುಸೇನಿ ಅವರ ಅಗಲಿಕೆಯಿಂದ ನೊಂದಿರುವ ಅವರ ಬಂಧು ಮಿತ್ರರಿಗೆ, ಅನುಯಾಯಿಗಳಿಗೆ ನನ್ನ ಸಂತಾಪಗಳು’ ಎಂದಿದ್ದಾರೆ.

‘ಖಾಜಾ ಬಂದಾನವಾಜ್ ದರ್ಗಾದ ಗುರುಗಳಾದ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ನಿಧನದ ಸುದ್ದಿಯು ನನ್ನಲ್ಲಿ ಅತ್ಯಂತ ನೋವುಂಟುಮಾಡಿದೆ.

ನಾಡಿನ ಸೂಫಿ ಪರಂಪರೆಗೆ, ಭಾವೈಕ್ಯತೆಯ ಪರಂಪರೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.

‘ಅವರೊಂದಿಗಿನ ಒಡನಾಟವು ನನ್ನಲ್ಲಿ ಸ್ಫೂರ್ತಿ ತುಂಬುತ್ತಿತ್ತು, ಸೂಫಿ ತತ್ವಗಳಿಂದ ಸಮಾಜಕ್ಕೆ ಆದ್ಯಾತ್ಮಿಕ ಮಾರ್ಗದರ್ಶನ ನೀಡುವುದರ ಜೊತೆಜೊತೆಗೆ ವೈಜ್ಞಾನಿಕ ಮನೋಭಾವದಿಂದಲೂ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು ಅವರ ವಿಶಿಷ್ಠ ಸಾಧನೆಯಾಗಿದೆ. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣದಿಂದ ಸಮಾಜದ ಏಳಿಗೆಗೆ ಶ್ರಮಿಸಿದ ಅವರ ಸಮಾಜಮುಖಿ ಕಾಳಜಿಯು ಸದಾ ಸ್ಮರಣಿಯವಾದದ್ದು’ ಎಂದಿದ್ದಾರೆ.

‘ಶರಣ ಗುಡಿಯೊಂದಿಗೆ ಬಂದಾನವಾಜ ದರ್ಗಾವನ್ನು ಬೆಸೆದು ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಅವರ ಕಾರ್ಯಗಳು ನೆನಪಿನಲ್ಲಿ ಉಳಿಯುವಂತಹವು. ಅವರ ಅಗಲಿಕೆಯಿಂದ ದುಃಖಿತನ್ನಾಗಿದ್ದೇನೆ, ಅವರ ಬಂಧುಗಳು, ಅನುಯಾಯಿಗಳ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಹೇಳಿದ್ದಾರೆ.

‘ಸೈಯದ್ ಶಹಾ ಖುಸ್ರೊ ಹಸೇನಿ ಅವರ ಅಕಾಲಿಕ ನಿಧನ ಕೇಳಿ ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು’ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

‘ಐತಿಹಾಸಿಕ ಬಂದಾನವಾಜ್ ದರ್ಗಾದ ಸೂಫಿ ಸಂತ, ಪ್ರಖ್ಯಾತ ಧಾರ್ಮಿಕ ನೇತಾರರಾದ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ನಿಧನ ನನಗೆ ತೀವ್ರ ದುಃಖ ತಂದಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಭಿಮಾನಿ ಬಳಗಕ್ಕೆ ಈ ನೋವು ನೀಗಿಕೊಳ್ಳುವ ಶಕ್ತಿ ದೊರಕಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಆಮ್ ಅದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಂತಾಪ ಸೂಚಿಸಿದ್ದಾರೆ.

ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ ಅವರ ಅಂತಿಮ ದರ್ಶನಕ್ಕಾಗಿ ಮನೆಯ ಮುಂದೆ ನಿಂತ ಭಕ್ತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.