ಕಲಬುರಗಿ: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಳಿಗಾಗಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ತಂಡ ಕಲಬುರಗಿ ನಗರದಲ್ಲಿ ಶೋಧ ಕಾರ್ಯ ಮುಂದುವರಿಸಿದೆ.
ಮೂರು ದಿನಗಳಿಂದ ನಗರದಲ್ಲಿ ಬೀಡುಬಿಟ್ಟಿರುವ ಎನ್‌ಐಎ ಅಧಿಕಾರಿಗಳು ಹಲವು ಆಯಾಮಗಳಿಂದ ಶಂಕಿತರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್‌ಐಎ ಅಧಿಕಾರಿಗಳು ಸೋಮವಾರ ನಗರದಲ್ಲಿನ ಹಲವು ಮಸೀದಿಗಳಿಗೆ ತೆರಳಿ, ಶೋಧ ಕಾರ್ಯ ನಡೆಸಿದರು. ಮಸೀದಿಗಳ ಸಿ.ಸಿ ಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಂಕಿತ ಆರೋಪಿ ಕಲಬುರಗಿಯಲ್ಲಿ ಉಳಿದುಕೊಂಡಿದ್ದಾನೆ ಅಥವಾ ಮುಂದೆ ಎಲ್ಲಿಗಾದರೂ ಹೋದನೆ ಎಂಬ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಎನ್‌ಐಎ ತಂಡ ಪತ್ತೆ ಕಾರ್ಯನಡೆಸಿದೆ ಎಂದು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.