ಕಲಬುರಗಿ: ಇಲ್ಲಿನ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್‌ಗಳು ಪತ್ತೆ, ವಿಡಿಯೊ ಕಾಲ್ ಮೂಲಕ ಹನಿಟ್ರ್ಯಾಪ್ ಆರೋಪ ಹಾಗೂ ಕೈದಿಗಳ ಹೊಡೆದಾಟ ಪ್ರಕರಣಗಳ ಸಂಬಂಧ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರಾಗೃಹದ ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು ಪರಮಾನಂದ ಅವರು ಅಮಾನತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಕಾರಾಗೃಹ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಈ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆ, ಐಷಾರಾಮಿ ಜೀವನದ ಜತೆಗೆ ಹನಿಟ್ರ್ಯಾಪ್ ಆರೋಪದ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆ ಬಳಿಕ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ಕೊಟ್ಟು, ಪರಿಶೀಲಿಸಿ ತನಿಖೆಗೆ ಆದೇಶಿಸಿದ್ದರು. ಎಸ್ಪಿ ಯಶೋಧಾ ವಂಟಗೋಡಿ ಅವರೂ ಭೇಟಿ ನೀಡಿದ್ದರು.
‘ಜೈಲಿನಲ್ಲಿ ನಡೆದ ಸರಣಿ ಪ್ರಕರಣಗಳ ಕುರಿತು ತನಿಖೆ ನಡೆಯುತ್ತಿದ್ದು, ಇನ್ನಷ್ಟು ಅಧಿಕಾರಿಗಳ ತಲೆದಂಡ ಆಗುವ ಸಾಧ್ಯತೆ ಇದೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.