ADVERTISEMENT

ಹಳ್ಳದ ನೀರು ಕೊಟ್ಟಿಗೆಗೆ ನುಗ್ಗಿ ಜೋಡೆತ್ತು ಸಾವು

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 9:14 IST
Last Updated 12 ಜೂನ್ 2024, 9:14 IST
<div class="paragraphs"><p>ಕಮಲಾನಗರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಮೀನಿಗೆ ನುಗ್ಗಿದ ಹಳ್ಳದ ನೀರು</p></div>

ಕಮಲಾನಗರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಮೀನಿಗೆ ನುಗ್ಗಿದ ಹಳ್ಳದ ನೀರು

   

ಕಮಲಾಪುರ (ಕಲಬುರಗಿ ಜಿಲ್ಲೆ): ಆಳಂದ ತಾಲ್ಲೂಕಿನ ಕಮಲಾನಗರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ದನದ ಕೊಟ್ಟಿಗೆಗೆ ನುಗ್ಗಿ ಜೋಡೆತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ.

ರೈತ ಕಲ್ಯಾಣಿ ಬಸವರಾಜ ಕೆರುಳ್ಳಿ ಅವರಿಗೆ ಸೇರಿ್ ಎರಡು ಎತ್ತುಗಳು ಮೃತಪಟ್ಟಿವೆ. ಕೃಷಿ ಪರಿಕರಗಳು ಕೊಚ್ಚಿಹೋಗಿದ್ದು, ಸುಮಾರು ₹1.50 ಲಕ್ಷ ಹಾನಿಯಾಗಿದೆ.

ADVERTISEMENT

ಕಲ್ಯಾಣಿ ಅವರು ಮಂಗಳವಾರ ಸಂಜೆ ತಮ್ಮ ಜಮೀನಿನ ಕೊಟ್ಟಿಗೆಯಲ್ಲಿ ಎತ್ತುಗಳನ್ನು ಕಟ್ಟಿ ಮನೆಗೆ ಬಂದಿದ್ದರು. ರಾತ್ರಿಯಿಡಿ ರಭಸದಿಂದ ಮಳೆ ಸುರಿದಿದೆ. ಕಮಲಾನಗರ- ಬೆಡಜುರ್ಗಿ ಮಧ್ಯದ ಗಡಿಹಳ್ಳದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ದನದ ಕೊಟ್ಟಿಗೆಗೆ ನುಗ್ಗಿದ್ದು, ದನಗಳನ್ನ ದಾವಣಿಗೆ ಕಟ್ಟಿದ್ದರಿಂದ ಪ್ರವಾಹ ಎದುರಿಸಲು ಆಗದೆ ಉಸಿರು ಗಟ್ಟಿ ಸ್ಥಳದಲ್ಲೇ ಮೃತಪಟ್ಟಿವೆ. ಸುಮಾರು ₹1 ಲಕ್ಷ ಮೌಲ್ಯದ ಎತ್ತು ಹಾಗೂ ₹50 ಸಾವಿರ ಮೌಲ್ಯದ ಪಂಪ್‌ಸೆಟ್, ಸ್ಪಿಂಕಲರ್ ಪೈಪ್‌ ಕೊಚ್ಚಿ ಹೋಗಿವೆ ಎಂದು ಕಲ್ಯಾಣಿ ತಿಳಿಸಿದರು.

ಪಶು ವೈದ್ಯಾಧಿಕಾರಿ ಬಸವರಾಜ ಸಪ್ಪಾಣಿ, ಕಂದಾಯ ನಿರೀಕ್ಷಕ ಮಲ್ಲಿನಾಥ ಮರಗುತ್ತಿ, ಗ್ರಾಮ ಲೆಕ್ಕಾಧಿಕಾರಿ ಸುನಿತಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.