ADVERTISEMENT

KEA ನೇಮಕಾತಿ ಅಕ್ರಮ: ಪಾಟೀಲಗೆ ಫ್ಲ್ಯಾಟ್ ಬಾಡಿಗೆ ಕೊಟ್ಟ ಮಾಲೀಕ ಸೇರಿ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2023, 23:30 IST
Last Updated 9 ನವೆಂಬರ್ 2023, 23:30 IST
<div class="paragraphs"><p>ಅಪಾರ್ಟ್‌ಮೆಂಟ್‌ ಆವರಣದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಆರ್.ಡಿ. ಪಾಟೀಲ</p></div>

ಅಪಾರ್ಟ್‌ಮೆಂಟ್‌ ಆವರಣದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಆರ್.ಡಿ. ಪಾಟೀಲ

   

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಕಿಂಗ್‌ಪಿನ್ ಆರ್.ಡಿ. ಪಾಟೀಲನ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳದೆ ಫ್ಲ್ಯಾಟ್ ಬಾಡಿಗೆ ನೀಡಿದ ಅಪಾರ್ಟ್‌ಮೆಂಟ್ ಮಾಲೀಕ ಶಂಕರಗೌಡ ರಾಮಚಂದ್ರ ಯಾಳವಾರ ಹಾಗೂ ಅಲ್ಲಿನ ಸೂಪರ್ ವೈಸರ್ ಮತ್ತು ಸೆಕ್ಯೂರಿಟಿ ನೋಡಿಕೊಳ್ಳುತ್ತಿದ್ದ ಶಹಾಬಾದ್ ಮೂಲದ ದಿಲೀಪ್ ಪವಾರ ಎಂಬುವವರನ್ನು ಅಫಜಲಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ಆರ್.ಡಿ.ಪಾಟೀಲ ಬಗ್ಗೆ ಮಾಧ್ಯಮಗಳಲ್ಲಿ ಇಷ್ಟೊಂದು ಚರ್ಚೆ ನಡೆಯುತ್ತಿದ್ದರೂ ಮನೆ ನೀಡಿದ ಆರೋಪ ಮತ್ತು ಪೊಲೀಸರಿಗೆ ಮಾಹಿತಿ ನೀಡದೆ ಕಿಂಗ್‌ಪಿನ್ ತಲೆ ಮರೆಸಿಕೊಳ್ಳಲು ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್ಪಿ ಶ್ರೀನಿಧಿ, ಡಿವೈಎಸ್ಪಿ ಗೋಪಿ ಮಾರ್ಗದರ್ಶನದಲ್ಲಿ ಸಿಪಿಐ ಪಂಡಿತ ಸಗರ ಹಾಗೂ ಸಿಬ್ಭಂದಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ನಗರ ಠಾಣೆ ಪೊಲೀಸರು ಪಾಟೀಲನ ಸಹಚರ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದ ಶಿವರಾಜ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.