ADVERTISEMENT

ಕಲಬುರಗಿ: ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ

ಮೇ 7ರಂದು ಎಲ್ಲರೂ ತಪ್ಪದೇ ಮತಚಲಾಯಿಸಿ: ಬಿ.ಫೌಜಿಯಾ ತರನ್ನುಮ್

​ಪ್ರಜಾವಾಣಿ ವಾರ್ತೆ
Published 1 ಮೇ 2024, 14:07 IST
Last Updated 1 ಮೇ 2024, 14:07 IST
<div class="paragraphs"><p>ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಯ ಮಾರುಕಟ್ಟೆ ಬಳಿ ಮತದಾರರಿಗೆ ಜಾಗೃತಿ ಮೂಡಿಸಲು "ನಮ್ಮ‌ ನಡೆ‌-ಮತಗಟ್ಟೆ ಕಡೆ" ಅಭಿಯಾನ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥ ನಡೆಸಿದರು</p></div>

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಯ ಮಾರುಕಟ್ಟೆ ಬಳಿ ಮತದಾರರಿಗೆ ಜಾಗೃತಿ ಮೂಡಿಸಲು "ನಮ್ಮ‌ ನಡೆ‌-ಮತಗಟ್ಟೆ ಕಡೆ" ಅಭಿಯಾನ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥ ನಡೆಸಿದರು

   

–ಪ್ರಜಾವಾಣಿ ಚಿತ್ರ

ಕಲಬುರಗಿ: ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯುತ್ತಿದ್ದು, ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದರು.

ADVERTISEMENT

ನಗರದ ಗಂಜ್‍ನಲ್ಲಿರುವ ನಗರೇಶ್ವರ ಶಾಲೆಯ ಮೈದಾನದಲ್ಲಿ ಭಾನುವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಕಲಬುರಗಿ ಸೈಕ್ಲಿಂಗ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ‘ಸೈಕಲ್ ಜಾಥಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ ಪಾಟೀಲ ಮಾತನಾಡಿ, ‘ಚುನಾವಣಾಧಿಕಾರಿಗಳು ಮತದಾರರ ಸ್ಲೀಪ್ ಹಿಂಭಾಗದಲ್ಲಿ ಮತಗಟ್ಟೆಯ ವಿಳಾಸ ಇರುವ ಕ್ಯೂಆರ್ ಕೋಡ್‍ಗಳನ್ನು ಮುದ್ರಿಸುವ ವ್ಯವಸ್ಥೆ ಮಾಡಿದ್ದಾರೆ. ಕ್ಯೂಆರ್ ಕೋಡರ್‌ ಸ್ಕ್ಯಾನ್ ಮಾಡಿದ ಕೂಡಲೇ ಮತಗಟ್ಟೆಯ ವಿಳಾಸ ಕಾಣಿಸಿಕೊಳ್ಳುತ್ತದೆ. ಸುಲಭವಾಗಿ ಮತಗಟ್ಟೆ ಗುರುತಿಸಲು ಮತ್ತು ಅಲ್ಲಿಗೆ ಹೋಗಲು ಇದು ನೆರವಾಗುತ್ತದೆ’ ಎಂದರು.

ಪ್ರೊಬೇಷನರಿ ಐಎಎಸ್ ಅಧಿಕಾರಿ ಗಜಾನನ ಬಾಳೆ ಮಾತನಾಡಿ, ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರತಿಶತ ಬಹಳ ಕಡಿಮೆ ಆಗಿದೆ. ಈ ಬಾರಿ ನೂರಕ್ಕೆ ನೂರರಷ್ಟು ಮತದಾನ ಮಾಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಅವರು, ಭಾರತದ ಚುನಾವಣಾ ಆಯೋಗದ ಸ್ವೀಪ್ ಧ್ವಜಾರೋಹಣ ನೆರವೇರಿಸಿ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಮತದಾರರ ಜಾಗೃತಿ ಮೂಡಿಸುವ ‘ನಾ ಭಾರತ’ ಎಂಬ ದೃಶ್ಯ ಗೀತೆಯನ್ನು ಪ್ರದರ್ಶಿಸಲಾಯಿತು.

ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಸೈಕ್ಲಿಂಗ್ ಜಾಥಾದ ಅಧ್ಯಕ್ಷ ಶರಣಕುಮಾರ ಶೆಟಗಾರ ಮಾತನಾಡಿದರು.

ಪೊಲೀಸ್‌ ಕಮಿಷನರ್‌ ಚೇತನ್‌ ಆರ್., ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಆಕಾಶ ಶಂಕರ್, ಪೊಲೀಸ್‌ ತರಬೇತಿ ಕೇಂದ್ರದ ಪ್ರಾಂಶುಪಾಲ ಡೆಕ್ಕಾ ಕಿಶೋರ್ ಬಾಬು, ಜಿ.ಪಂ ಉಪಕಾರ್ಯದರ್ಶಿ ಅಬ್ದುಲ್ ಅಜೀಮ್, ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ತಾ.ಪಂ ಇಒ ಮಹ್ಮದ್ ಸೈಯಲ್ ಪಟೇಲ್ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಜಗತ್ ವೃತ್ತದಲ್ಲಿ ಸೈಕಲ್‌ ಜಾಥಾಕ್ಕೆ ಪೊಲೀಸ್‌ ಕಮಿಷನರ್‌ ಚೇತನ್‌ ಆರ್. ಚಾಲನೆ ನೀಡಿದರು. ಜಾಥಾವು ನಗರೇಶ್ವರ ಶಾಲೆ ಆವರಣಕ್ಕೆ ಬಂದು ಮುಕ್ತಾಯಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.