ADVERTISEMENT

ವ್ಯಾಸರಾಯರ ಬೃಂದಾವನ ಧ್ವಂಸ: ತನಿಖೆಗೆ ಉತ್ತರಾದಿಮಠದ ಸತ್ಯಾತ್ಮತೀರ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 6:33 IST
Last Updated 18 ಜುಲೈ 2019, 6:33 IST
ಕಲಬುರ್ಗಿಯಲ್ಲಿ ಉತ್ತರಾದಿಮಠದ ಸತ್ಯಾತ್ಮತೀರ್ಥರಿಂದ ತಪ್ತಮುದ್ರಾಧಾರಣೆ ಮಾಡಿದರು.
ಕಲಬುರ್ಗಿಯಲ್ಲಿ ಉತ್ತರಾದಿಮಠದ ಸತ್ಯಾತ್ಮತೀರ್ಥರಿಂದ ತಪ್ತಮುದ್ರಾಧಾರಣೆ ಮಾಡಿದರು.   

ಕಲಬುರ್ಗಿ: ಕೊಪ್ಪಳ ಜಿಲ್ಲೆ ಆನೆಗೊಂದಿಯಲ್ಲಿ ತುಂಗಾಭದ್ರಾ ನದಿ ತಟದಲ್ಲಿರುವವ್ಯಾಸರಾಜರ ವೃಂದಾವನವನ್ನು ಧ್ವಂಸಗೊಳಿಸಿರುವ ದುಷ್ಕರ್ಮಿಗಳ ಕೃತ್ಯಕ್ಕೆಉತ್ತರಾದಿಮಠದ ಸತ್ಯಾತ್ಮತೀರ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ವಿದ್ಯಾನಗರದ ಕೃಷ್ಣಮಂದಿರದಲ್ಲಿ ಮಹಾಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದರು.

ADVERTISEMENT

ಬೃಂದಾವನದ ಪುನರ್ ನಿರ್ಮಾಣಕ್ಕೆ ವ್ಯಾಸರಾಜಮಠದ ಸ್ವಾಮಿಗಳು ಮುಂದಾಗಿದ್ದಾರೆ. ಅದಕ್ಕೆ ಉತ್ತರಾದಿಮಠ ಅಗತ್ಯ ನೆರವು ನೀಡಲಿದೆ ಎಂದರು. ಧಾರ್ಮಿಕ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಆನೆಗೊಂದಿಗೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.