ಕಲಬುರ್ಗಿ: ತಾಲ್ಲೂಕಿನ ನಂದಿಕೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ ಬಿ.ವಳಕೇರಿ, ಅವರ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಿತಾ ವಳಕೇರಿ ಅವರು ನಂದಿಕೂರ ಗ್ರಾಮದ ರುದ್ರಭೂಮಿಯಲ್ಲಿ ಭಾನುವಾರ 18ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.
ರುದ್ರಭೂಮಿ ಆವರಣವನ್ನು ಸ್ವಚ್ಛಗೊಳಿಸಿ, ಸಸಿ ನೆಟ್ಟರು. ಬಳಿಕ ಬಸವೇಶ್ವರ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿದರು. ಜು.9ರಂದು ಮಹಿಳೆಯರಿಗೆ ಹೊಲಿಗೆ ಮತ್ತು ಕೌಶಲ ತರಬೇತಿ ಹಮ್ಮಿಕೊಂಡಿದ್ದಾರೆ.
‘ತಾಲ್ಲೂಕಿನ ನಂದಿಕೂರ, ಖಣದಾಳ, ಇಟಗಾ, ಸಿನ್ನೂರ, ಪಾಣೇಗಾಂವ, ಸೀತನೂರ, ಕೋಟನೂರ (ಡಿ) ಗ್ರಾಮಗಳ ಮಹಿಳೆಯರಿಗೆ ಸ್ವಾವಲಂಬಿ ಬದುಕು ಸಾಗಿಸಲು ಅನುಕೂಲವಾಗುವಂತೆ ಹೊಲಿಗೆ ತರಬೇತಿ ನೀಡಲಾಗುವುದು’ ಎಂದು ಪವನಕುಮಾರ ವಳಕೇರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.