ADVERTISEMENT

ಕೊಡಗಿನ ವೀರ ಸೇನಾನಿಗಳ ಅವಹೇಳನ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 22:52 IST
Last Updated 22 ನವೆಂಬರ್ 2024, 22:52 IST
FIR.
FIR.   

ಮಡಿಕೇರಿ: ಕೊಡಗಿನ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ವಾಟ್ಸ್ಆ್ಯಪ್ ಗ್ರೂಪ್‌ವೊಂದರಲ್ಲಿ ಅವಹೇಳನಕಾರಿ ಪದ ಬಳಸಿರುವುದರ ವಿರುದ್ಧ ಕೊಡಗಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಆರೋಪಿಯನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿವೆ.

ಈ ಕುರಿತು ಕೊಡವ ಸಮಾಜ, ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಸೇರಿದಂತೆ ಹಲವು ಸಂಘಟನೆಗಳು ಎಸ್ಪಿಗೆ ದೂರು  ನೀಡಿವೆ. ‘ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಹ ಒತ್ತಾಯಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎಸ್ಪಿ ಕೆ.ರಾಮರಾಜನ್, ‘ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಸಪ್ತಸಾಗರ (ಕಡಲು) ಎಂಬ  ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶವಿದ್ದು, ಗ್ರೂಪ್‌ನ ಅಡ್ಮಿನ್‌ ಕರೆಸಿ ಅವಹೇಳನಕಾರಿಯಾದ ಸಂದೇಶ ಹಾಕಿದವರ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.