ADVERTISEMENT

ಕೊಡಗು | ಹುಲಿ ದಾಳಿಗೆ ಅಸ್ಸಾಂನ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 14:51 IST
Last Updated 18 ಏಪ್ರಿಲ್ 2024, 14:51 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಅಸ್ಸಾಂನಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ ಮುಝೀದ್ ರೆಹಮಾನ್ (55) ಎಂಬುವವರು ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

‘ಇವರು ಜಾನುವಾರು ಮೇಯಿಸುತ್ತಿದ್ದಾಗ ಹಸುಗಳ ಮೇಲೆ ಹುಲಿ ಎರಗಿದೆ. ಹಸುಗಳು ಬೆದರಿ ದೂರ ಓಡಿ ಹೋಗಿವೆ. ಆದರೆ, ಪಕ್ಕದಲ್ಲೇ ಇದ್ದ ಮುಝೀದ್ ರೆಹಮಾನ್ ಅವರನ್ನು ಹುಲಿ ಹಿಡಿದು, ತೀವ್ರವಾಗಿ ಗಾಯಗೊಳಿಸಿದೆ. ಇದರಿಂದ ಸ್ಥಳದಲ್ಲೆ ಅವರು ಮೃತಪಟ್ಟಿದ್ದಾರೆ’ ಎಂದು ತಿತಿಮತಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ತೆರಳಿದ್ದಾರೆ.

ಜನವರಿಯಿಂದ ಇಲ್ಲಿಯವರೆಗೆ ವನ್ಯಜೀವಿ ಮಾನವ ಸಂಘರ್ಷದಲ್ಲಿ ಕೊಡಗು ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ. ಇವರಲ್ಲಿ 6 ಮಂದಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.