ADVERTISEMENT

ಸುಂಟಿಕೊಪ್ಪ: ಉತ್ತಮ ಮುಂಗಾರು ಮಳೆ, ಹದ ಭೂಮಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 7:35 IST
Last Updated 24 ಜುಲೈ 2024, 7:35 IST
ಸುಂಟಿಕೊಪ್ಪದಲ್ಲಿ ಪಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು ಮಳೆಯಿಂದ ಕೃಷಿಕರು ಹೆಚ್ಚಿನ ಉತ್ಸಾಹದೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು.
ಸುಂಟಿಕೊಪ್ಪದಲ್ಲಿ ಪಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು ಮಳೆಯಿಂದ ಕೃಷಿಕರು ಹೆಚ್ಚಿನ ಉತ್ಸಾಹದೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು.   

ಸುಂಟಿಕೊಪ್ಪ: ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಬಿದ್ದ ಕಾರಣ ಕೃಷಿಕರು ಹೆಚ್ಚಿನ ಉತ್ಸಾಹದೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಬಿದ್ದ ಪರಿಣಾಮ ರೈತರಿಗೆ ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಲು ಸಹಕಾರಿಯಾಯಿತು. ಜೂನ್ ತಿಂಗಳಲ್ಲಿ ಬಹುಪಾಲು ಮಳೆಯಾಗುವುದರೊಂದಿಗೆ ಜುಲೈನಲ್ಲಿ ಪುನರ್ವಸು ಮಳೆ ಆರ್ಭಟದಿಂದ ಭೂಮಿ ಹದವಾಯಿತು. ಹೊಳೆ, ತೋಡು, ನಾಲೆ,ಝರಿಗಳು ತುಂಬಿ ಹರಿದಿದ್ದು ಗದ್ದೆಗಳಲ್ಲೂ ನೀರು ತುಂಬಿರುವುದರಿಂದ ಉಳುಮೆ ಮಾಡಿ ಭತ್ತದ ಹಾಕಲು ಸಹಕಾರಿಯಾಯಿತು. ಮೊದಲೇ ಬೀಜ ಹಾಕಿದ ರೈತರಿಗೆ ಸಸಿಮಡಿ ಬೆಳೆದಿದ್ದರಿಂದ ಈಗ ಗದ್ದೆ ಹದಮಾಡಿ ನಾಟಿ ಮಾಡಲು ಅನುಕೂಲಕರವಾಗಿದೆ.

ಸುಂಟಿಕೊಪ್ಪದ ಗದ್ದೆಹಳ್ಳ ನಿವಾಸಿ ಪ್ರಗತಿಪರ ಕೃಷಿಕ ಪಟ್ಟೆಮನೆ ಉದಯಕುಮಾರ್, ಪ್ರಸನ್ನ, ಮಧು, ಸದಾಶಿವ ಅವರು ಎರಡೂವರೆ ಎಕರೆ ಗದ್ದೆಯಲ್ಲಿ ಕೃಷಿಕರು ನಾಟಿ ಕಾರ್ಯದಲ್ಲಿ ಮಗ್ನರಾಗಿರುವುದು ಕಂಡು ಬಂತು.

ADVERTISEMENT

ಕೊಡಗರಹಳ್ಳಿ, ಕಂಬಿಬಾಣೆ, ಹೆರೂರು, ಹರದೂರು, ಹಾರ್‌ಬೈಲ್, ಕೆದಕಲ್, ಹೊರೂರು, ಹಾಲೇರಿ, ಕಾಂಡನಕೊಲ್ಲಿ ಮೊದಲಾದ ಗ್ರಾಮದಲ್ಲೂ ನಾಟಿ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.