ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 7:18 IST
Last Updated 15 ಜೂನ್ 2024, 7:18 IST

ನಂಜನಗೂಡು: ಮೈಸೂರು ಜಿಲ್ಲಾ ಗಾಣಿಗರ ಸಂಘದಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ80 ಕ್ಕಿಂತ ಹೆಚ್ಚು ಅಂಕ ಪಡೆದ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಎನ್.ಸಿ.ಉಮೇಶ್‌ ಹೇಳಿದರು.

ಜೌಿೌಳ್ತಿತಗ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಲ್ಲೆಯ ಸಮಾಜದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಲು ಅಂಕಪಟ್ಟಿ, ಆಧಾರ್‌ ಕಾರ್ಡ್‌ ಹಾಗೂ ಜಾತಿ ಪ್ರಮಾಣಪತ್ರವನ್ನು ಮೈಸೂರು ಜಿಲ್ಲಾ ಗಾಣಿಗರ ಸಂಘ, 6ನೇ ಮುಖ್ಯರಸ್ತೆ, ಗಾಣಿಗರ ವಿದ್ಯಾರ್ಥಿ ನಿಲಯ, ಸರಸ್ವತಿಪುರಂ, ಮೈಸೂರು ಈ ವಿಳಾಸಕ್ಕೆ ಜೂನ್‌ 25 ರೊಳಗಾಗಿ ಕಳುಹಿಸಿಕೊಡಬೇಕು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT