ADVERTISEMENT

ಮಡಿಕೇರಿ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 16:00 IST
Last Updated 9 ಜುಲೈ 2024, 16:00 IST
   

ಮಡಿಕೇರಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ವೆಬ್-ಸೈಟ್ www.awards.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಗೆ ನೀಡಬೇಕು. ಮಾಹಿತಿಗೆ ಕಚೇರಿಯ ದೂ: 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.