ನಾಪೋಕ್ಲು: ಸಾಹಿತಿ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಪಾಡಿ ಇಗ್ಗುತ್ತಪ್ಪ ದೇವಾಲಯಕ್ಕೆ 10ರಿಂದ 15 ಮಂದಿ ಮಹಿಳೆಯರು ಪಾದರಕ್ಷೆ ಧರಿಸದೇ ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಮಳೆಗಾಗಿ ಪ‍್ರಾರ್ಥಿಸಿದರು.
ಕೊಡಗಿನ 4 ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಕಕ್ಕಬೆಯ ಪಟ್ಟಣದ ಸ್ವಾಗತ ಕಮಾನುವಿನಿಂದ ಪಾಡಿ ಇಗ್ಗುತ್ತಪ್ಪ ದೇವಾಲಯದವರೆಗೆ ಪೂಜಾ ಪರಿಕರಗಳನ್ನು ಹೊತ್ತು ನಡೆದರು. ಬಳಿಕ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.