ADVERTISEMENT

ಓದಿನೊಂದಿಗೆ ಪಠ್ಯೇತರ ಚಟುವಟಿಕೆ ಇರಲಿ: ಎಸ್ಪಿ ಕೆ.ರಾಮರಾಜನ್

ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2023, 13:43 IST
Last Updated 10 ಡಿಸೆಂಬರ್ 2023, 13:43 IST
<div class="paragraphs"><p>ನಾಪೋಕ್ಲು ಸಮೀಪದ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದವರು.</p></div>

ನಾಪೋಕ್ಲು ಸಮೀಪದ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದವರು.

   

ನಾಪೋಕ್ಲು: ‘ವಿದ್ಯಾರ್ಥಿಗಳಲ್ಲಿ ಓದುವುದರ ಜೊತೆಗೆ ಇತರೆ ಚಟುವಟಿಕೆಗಳು ಇದ್ದಾಗ ಮಾತ್ರ ದೈಹಿಕ ಮತ್ತು ಮಾನಸಿಕವಾಗಿ ಉತ್ಸುಕತೆಯಿಂದ ಇರಲು ಸಾಧ್ಯ’ ಎಂದು ಎಸ್ಪಿ ಕೆ.ರಾಮರಾಜನ್ ಹೇಳಿದರು.

ಇತ್ತೀಚೆಗೆ ಆಯೋಜಿಸಲಾಗಿದ್ದ ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ADVERTISEMENT

‘ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆಯ ಶೈಕ್ಷಣಿಕ ವ್ಯವಸ್ಥೆ ನಗರಗಳ ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವ್ಯವಸ್ಥೆಯನ್ನೂ ಮೀರಿಸುವಂತಿದೆ. ಕ್ರೀಡೆಯು ಜೀವನದಲ್ಲಿ ಹೆಚ್ಚು ಚಟುವಟಿಕೆಯಿಂದರಲು ಸಹಾಯ ಮಾಡುತ್ತದೆ. ಹಾಗಾಗಿ ಶಾಲೆಗಳಲ್ಲಿ ಕ್ರೀಡೆಗೆ ಹೆಚ್ಚು ಆದ್ಯತೆ ನೀಡಬೇಕು. ಕ್ರೀಡೆಗಳಲ್ಲಿ ಸೋಲು ಧೈರ್ಯ ತುಂಬುತ್ತದೆ. ತರಗತಿಗಳಲ್ಲಿ ಹೆಚ್ಚು ಅಂಕ ಪಡೆಯುವುದು ಮಾತ್ರ ಶಾಲಾ ಜೀವನವಾಗದೆ ಅದಕ್ಕೂ ಮೀರಿ ಸಮುದಾಯದ ಬಗ್ಗೆ ಅರಿವು ಮೂಡಿಸುವ ವ್ಯವಸ್ಥೆಯನ್ನು ಶಾಲಾ ಶಿಕ್ಷಣವು ಒಳಗೊಂಡಿರಬೇಕು’ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆ ಅಧ್ಯಕ್ಷ ಮುಕ್ಕಾಟೀರ ರವಿಚೀಯಣ್ಣ ವಹಿಸಿ ಮಾತನಾಡಿ,‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು. ಪೋಷಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು’ ಎಂದರು.

ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ. ಮ್ಯಾಥ್ಯು, ನಿರ್ದೇಶಕರಾದ ಮಾಳೇಟಿರ ನವೀನ್ ಕಾರ್ಯಪ್ಪ, ಡಾ. ಜೆ.ಎ.ಕುಂಞಅಬ್ದುಲ್ಲಾ, ಬಡುವಂಡ ವಿಜಯ, ಅವರೆ ಮಾದಂಡ ಸುಗುಣ ಸುಬ್ಬಯ್ಯ ಮತ್ತು ಶಾಲಾ ಮುಖ್ಯಶಿಕ್ಷಕಿ ಶೀಲಾ ಅಬ್ದುಲ್ಲಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ರಛಿಸಿದ ವಿವಿಧ ರೀತಿಯ ವಿಜ್ಞಾನ ಮಾದರಿಗಳು, ಕರ ಕುಶಲವಸ್ತುಗಳು, ಚಿತ್ರಕಲೆಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು.  ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪಾರಿತೋಷಕ ಮತ್ತು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಸಮಾರಂಭದ ನಂತರ ಜರುಗಿದ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ರಂಜಿಸಿದವು.

ನಾಪೋಕ್ಲು ಸಮೀಪದ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.