ಕುಶಾಲನಗರ: ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ ಬಂಧನ ಖಂಡಿಸಿ ಬಿಜೆಪಿ ವತಿಯಿಂದ ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಪುರಸಭೆ ಸದಸ್ಯ ಅಮೃತ್ ರಾಜ್ ಮಾತನಾಡಿ,ಹಿಂದೂ ಕಾರ್ಯಕರ್ತರು ಮೇಲೆ ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಮಾಡುತ್ತಿರುವುದು ಖಂಡನೀಯ ಎಂದರು.
ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೃಷ್ಣಪ್ಪ ಕೃಷ್ಣಪ್ಪ ಮಾತನಾಡಿ, ಸರ್ಕಾರ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ, ಮೂರು ದಶಕಗಳ ಬಳಿಕ ಕರಸೇವಕನೊಬ್ಬನ ವಿರುದ್ದ ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿರುವ ಕಾಂಗ್ರೆಸ್ ಸರಕಾರ ಒಂದು ವರ್ಗದ ಓಲೈಕೆಗಾಗಿ ಸದಾ ಪ್ರಯತ್ನಿಸುತ್ತಿದೆ. ಹಿಂದೂ ವರ್ಗ ಬೇಡ ಎನ್ನುವ ರೀತಿಯ ವರ್ತನೆಯಲ್ಲಿ ತೊಡಗಿದೆ. ಬೆಳಗಾವಿಯಲ್ಲಿ ಬಾಲಕಿಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ದ ಕ್ರಮಕ್ಕೆ ಮುಂದಾಗದ ಸರಕಾರ ಇಲ್ಲಿ ದ್ವೇಷ ಸಾಧಿಸುತ್ತಿದೆ ಎಂದರು.
ಈ ಸಂದರ್ಭ ನಗರ ಬಿಜೆಪಿ ಘಟಕದ ಅಧ್ಯಕ್ಷ ಉಮಾಶಂಕರ್ ಮುಖಂಡರಾದ ಜಿ.ಎಲ್.ನಾಗರಾಜು, ಕೆ.ಜಿ.ಮನು, ನವನೀತ್, ಎಂ.ಎಂ.ಚರಣ್, ನಾರಾಯಣ್, ದೇವರಾಜ್, ರೂಪಾ ಉಮಾಶಂಕರ್, ನವನೀತ್, ಮಧುಸೂದನ್, ಮಂಜುನಾಥ್, ರಾಜೀವ, ಚಂದ್ರಶೇಖರ್ ಹೆರೂರು, ಚಂದ್ರು, ಗಣಪತಿ, ಚಂದ್ರಶೇಖರ್, ಗೀತಾ, ಸೋಮಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.