ನಾಪೋಕ್ಲು:ಎಲ್ಲಾ ದಾನಗಳಿಗಿಂತ ಒಬ್ಬವ್ಯಕ್ತಿಯ ಜೀವ ಉಳಿಸುವ ರಕ್ತದಾನ ಶ್ರೇಷ್ಠದಾನ ಎಂದು ಮಡಿಕೇರಿಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುoಬಯ್ಯ ಹೇಳಿದರು.
ಸಮೀಪದ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಹಾಗೂ ಅದರ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.ವಿದ್ಯಾರ್ಥಿನಿ ಹರ್ಷಿತ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಶಿಬಿರದಲ್ಲಿ 41 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ವಿ.ಎ, ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ, ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.