ಗೋಣಿಕೊಪ್ಪಲು: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಐಮಂಗಲದಲ್ಲಿ (ಕೊಮ್ಮೆತೊಡು) ನೂರಾರು ಸದಸ್ಯರ ಸಹಭಾಗಿತ್ವದೊಂದಿಗೆ ಸೋಮವಾರ ರಾತ್ರಿ ಶ್ರದ್ಧಾಭಕ್ತಿಯಿಂದ ಕದಿರು ತೆಗೆಯಲಾಯಿತು.
ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐಮಂಗಲದ ಕೆಎಂಎ ಸದಸ್ಯ ಕೂತಂಬಟ್ಟೀರ ಹುಸೇನ್ ಅವರು ಪರಿಶುದ್ಧ ಸ್ವಲಾತ್ ನೊಂದಿಗೆ ಭತ್ತದ ತೆನೆಯನ್ನು ಕುಯ್ದು ನೆರೆದಿದ್ದವರಿಗೆಲ್ಲ ಹಂಚಿದರು.
ಕೆಎಂಎ ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಜಂಟಿ ಕಾರ್ಯದರ್ಶಿ ಕರತೋರೆರ ಕೆ ಮುಸ್ತಫ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ.ಇಸ್ಮಾಯಿಲ್, ಹಿರಿಯ ನಿರ್ದೇಶಕರಾದ ಚಿಮ್ಮಿಚಿರ ಕೆ. ಇಬ್ರಾಹಿಂ, ಕೊಂಡಂಗೇರಿ ಜಮಾಅತ್ ಅಧ್ಯಕ್ಷ ಕುಪ್ಪಂದಿರ ಕೆ. ಯೂಸೂಫ್ ಹಾಜಿ, ಕಾಟ್ರಕೊಲ್ಲಿ ಜಮಾಅತಿನ ಅಧ್ಯಕ್ಷ ಆಲೀರ ಎಂ. ರಶೀದ್ ಪಾಲ್ಗೊಂಡಿದ್ದರು.
ಬಳಿಕ ಕೋಳುಮಂಡ ರಫೀಕ್ ಅವರು ತಮ್ಮ ಮನೆಯಲ್ಲಿ ಸಾಂಪ್ರದಾಯಿಕ ತಂಬಿಟ್ಟು- ಪುತ್ತರಿ ಗೆಣಸು ಉಪಹಾರ ಮತ್ತು ಊಟೋಪಚಾರವನ್ನು ವ್ಯವಸ್ಥೆಗೊಳಿಸಿದ್ದರು. ಗದ್ದೆಯಿಂದ ತರಲಾದ ಕದಿರನ್ನು ಊಟದ ನಂತರ ಮನೆಗಳಿಗೆ ಕೊಂಡೊಯ್ಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.