ADVERTISEMENT

ಗಣಿತ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 13:16 IST
Last Updated 14 ನವೆಂಬರ್ 2024, 13:16 IST
ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಗಣಿತ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಬಹುಮಾನ ವಿತರಿಸಿದರು. ತಂಗಮ್ಮ, ಹರೀಶ್, ಶಿವಶಂಕರ್, ಮೋಹನ್ ಕುಮಾರಿ ಭಾಗವಹಿಸಿದ್ದರು

ಸೋಮವಾರಪೇಟೆ: ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಗಣಿತ ಸ್ಪರ್ಧೆಯ ವಿಜೇತ ಮಕ್ಕಳಿಗೆ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ. ಗೋಪಾಲಕೃಷ್ಣ ಬಹುಮಾನ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅನೇಕ ಯೋಜನೆಗಳನ್ನು ರೂಪಿಸಿದೆ. ಪೋಷಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಜ್ಞಾನ ಪಡೆದ ಶಿಕ್ಷಕರುಗಳು ಸರ್ಕಾರಿ ಶಾಲೆಯಲ್ಲಿ ಇದ್ದಾರೆ. ಉತ್ತಮವಾಗಿ ಕಲಿಸುತ್ತಿದ್ದಾರೆ. ಮಕ್ಕಳು ಕೂಡ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ತಂಗಮ್ಮ, ಪಂಚಾಯಿತಿ ಕಾರ್ಯದರ್ಶಿ ಕೆ.ವಿ.ಹರೀಶ್, ಶಿಕ್ಷಕರಾದ ಶಿವಶಂಕರ್, ಮೋಹನ್ ಕುಮಾರಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.