ಕುಶಾಲನಗರ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತೆಯೇ ಸೇವೆ ಅಭಿಯಾನದ ಮೂಲಕ ಶ್ರಮದಾನ ನಡೆಯಿತು.
ಗಾಂಧಿ ಜಯಂತಿಗೆ ಮುನ್ನಾ ದಿನ ಕೂಡ್ಲೂರು ಗ್ರಾಮದ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು.
ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ‘ಸ್ವಚ್ಛ ತಾ ಹಿ ಸೇವೆ’ ಹಾಗೂ ಶ್ರಮದಾನದ ಮಹತ್ವ ಕುರಿತು ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಸ್ವಚ್ಛ ಭಾರತ್ ಮಿಷನ್ ಮೂಲಕ ದೇಶದ ಜನರಲ್ಲಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದರು.
ಈ ಸಂದರ್ಭ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ ಡಿ.ರಮ್ಯ, ಶಿಕ್ಷಕರಾದ ದಯಾನಂದ ಪ್ರಕಾಶ್, ಕೆ.ಗೋಪಾಲಕೃಷ್ಣ, ಬಿ.ಎನ್. ಸುಜಾತ, ಎಸ್.ಎಂ.ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಸಮನ್ವಯ ಸಂಪನ್ಮೂಲ ಶಿಕ್ಷಕಿ ಟಿ.ವಿ.ಶೈಲಾ ಇದ್ದರು.
ವಿದ್ಯಾರ್ಥಿಗಳು ಸ್ವಚ್ಚತೆಯೇ ಸೇವೆ, ಸ್ವಚ್ಚತೆ ಇದ್ದಲ್ಲಿ ಆರೋಗ್ಯ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ನಮ್ಮ ಕಸ - ನಮ್ಮ ಹೊಣೆ ಎಂಬಿತ್ಯಾದಿ ಸ್ವಚ್ಚತೆಯ ಕುರಿತಾದ ಘೋಷಣಾ ಫಲಕಗಳನ್ನು ಹಿಡಿದು ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.