ADVERTISEMENT

ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಅ.20ರಂದು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 15:39 IST
Last Updated 18 ಅಕ್ಟೋಬರ್ 2024, 15:39 IST

ಸಿದ್ದಾಪುರ: ಅಮ್ಮತ್ತಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಅ.20ರಂದು ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ಕೋಕ್ ನಮ್ಮೆ ಅಂಗವಾಗಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

0.22 ರೈಫಲ್, 12 ಬೋರ್, ಏರ್ ರೈಫಲ್ ಎಗ್ ಶೂಟಿಂಗ್ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

0.22 ರೈಫಲ್ ಹಾಗೂ 12 ಬೋರ್ ವಿಭಾಗದಲ್ಲಿ ಪ್ರಥಮ ಬಹುಮಾನ ₹35 ಸಾವಿರ ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ₹25 ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ₹15 ಸಾವಿರ ಹಾಗೂ ಟ್ರೋಫಿ ನೀಡಲಾಗುತ್ತಿದೆ.

ADVERTISEMENT

ಏರ್ ರೈಫಲ್ ಎಗ್ ಶೂಟಿಂಗ್ ವಿಭಾಗದಲ್ಲಿ ಪ್ರಥಮ ಬಹುಮಾನ ₹5 ಸಾವಿರ ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ₹3 ಸಾವಿರ ನಗದು ಹಾಗೂ ತೃತೀಯ ಬಹುಮಾನ ₹2 ಸಾವಿರ ಹಾಗೂ ಟ್ರೋಫಿ ನೀಡಲಾಗುವುದು. ಮಾಹಿತಿಗೆ ಮೊ.9480308842, 9480463643 ಸಂಖ್ಯೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.