ADVERTISEMENT

ಹಸು ಕೊಂದ ಹುಲಿ ಪತ್ತೆಗೆ ಕೊಂಬಿಂಗ್ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 15:29 IST
Last Updated 18 ಅಕ್ಟೋಬರ್ 2024, 15:29 IST
ಅರಣ್ಯ ಇಲಾಖೆ ಸಿಬ್ಬಂದಿಗಳು ಕೊಂಬಿಂಗ್ ಕಾರ್ಯಾಚರಣೆ ನಡೆಸಿದರು
ಅರಣ್ಯ ಇಲಾಖೆ ಸಿಬ್ಬಂದಿಗಳು ಕೊಂಬಿಂಗ್ ಕಾರ್ಯಾಚರಣೆ ನಡೆಸಿದರು   

ಸಿದ್ದಾಪುರ: ಬಾಡಗ ಬಾಣಂಗಾಲ ಗ್ರಾಮದಲ್ಲಿ ಹುಲಿ ದಾಳಿಯಿಂದ ಹಸುವೊಂದು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಶುಕ್ರವಾರವೂ ಕೊಂಬಿಂಗ್ ಕಾರ್ಯಾಚರಣೆ ನಡೆಸಿದರು.

‘ಈ ಸಂದರ್ಭ ಮೈಲತ್ ಪುರದ ಸಮೀಪದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗಳು ಪಟಾಕಿ ಸಿಡಿಸಿದ್ದಾರೆ. ಈ ವೇಳೆ ಹುಲಿ ಅರಣ್ಯಕ್ಕೆ ತೆರಳಿದೆ. ಹುಲಿ ಹಾವಳಿ‌ ಮುಂದುವರೆದರೆ ಮೇಲಧಿಕಾರಿಗಳ ಆದೇಶ ಪಡೆದು ಬೋನು ಅಳವಡಿಸಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಗಂಗಾಧರ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಶಶಿ, ಆರ್.ಆರ್.ಟಿ ತಂಡ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.