ADVERTISEMENT

ಮಡಿಕೇರಿ: ಅಂಗನವಾಡಿ ಕಾರ್ಯಕರ್ತರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಮನವಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 13:44 IST
Last Updated 25 ನವೆಂಬರ್ 2024, 13:44 IST
ಬೋಯಿಕೆರಿ ಅಂಗನವಾಡಿಯಲ್ಲಿ ಮಕ್ಕಂದೂರು ಅಂಗನವಾಡಿ ಕಾರ್ಯಕರ್ತೆ ಪ್ರೇಮಾವತಿ ಹಾಗೂ ಬೋಯಿಕೇರಿ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಅವರನ್ನು ಸನ್ಮಾನಿಸಲಾಯಿತು
ಬೋಯಿಕೆರಿ ಅಂಗನವಾಡಿಯಲ್ಲಿ ಮಕ್ಕಂದೂರು ಅಂಗನವಾಡಿ ಕಾರ್ಯಕರ್ತೆ ಪ್ರೇಮಾವತಿ ಹಾಗೂ ಬೋಯಿಕೇರಿ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಅವರನ್ನು ಸನ್ಮಾನಿಸಲಾಯಿತು   

ಮಡಿಕೇರಿ: ಅಂಗನವಾಡಿ ಕಾರ್ಯಕರ್ತರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಅಂಗನವಾಡಿ ಶಿಕ್ಷಕಿ ಎಂದು ಪುನರ್ ಪದನಾಮಿಕರಿಸಬೇಕು ಎಂದು ಒತ್ತಾಯಿಸಿ ಬರೆದ ಮನವಿ ಪತ್ರವನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಸಂಘದ ಪ್ರತಿನಿಧಿಗಳು ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್‌ಗೌಡ ಅವರಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷತೆನ್ನಿರ ಮೈನಾ ಅವರ ಮೂಲಕ ಸಲ್ಲಿಸಿದರು.

ಬೋಯಿಕೆರಿ ಅಂಗನವಾಡಿಯಲ್ಲಿ ಮಕ್ಕಂದೂರು ಅಂಗನವಾಡಿ ಕಾರ್ಯಕರ್ತೆ ಪ್ರೇಮಾವತಿ ಹಾಗೂ ಬೋಯಿಕೇರಿ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಅವರಿಗೆ ಈಚೆಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಮನವಿ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚೇರಂಬಾಣೆ ವೃತ್ತದ 28 ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

ತೆನ್ನಿರ ಮೈನಾ ಮಾತನಾಡಿ, ‘ಸಂಸ್ಕಾರವಂತ ಸಮಾಜ ನಿರ್ಮಾಣದ ರುವಾರಿಗಳು ಅಂಗನವಾಡಿ ತಾಯಿಯಂದಿರು’ ಎಂದು ಶ್ಲಾಘಿಸಿದರು.

ADVERTISEMENT

ಸರ್ಕಾರದ ಎಲ್ಲಾ ಯೋಜನೆಗಳನ್ನು ಮಹಿಳೆಯರಿಗೆ ಮಕ್ಕಳಿಗೆ ಗ್ರಾಮಸ್ಥರಿಗೆ ತಲುಪಿಸುವಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮಾಜದ ಪರವಾಗಿ ಧನ್ಯವಾದಗಳು ಅರ್ಪಿಸಿದರು.

ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ‘30 ರಿಂದ 32 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ ಸರ್ಕಾರದಿಂದ ದೊರೆಯುವ ಸೌಲಭ್ಯದೊಂದಿಗೆ ಅತಿ ಹೆಚ್ಚು ಸಮುದಾಯದವರ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಉತ್ತಮ ಮಟ್ಟದಲ್ಲಿ ನಡೆಸಿದ್ದು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಎಲ್ಲ ರೀತಿಯ ಸೌಲಭ್ಯಗಳು ದೊರಕುವಲ್ಲಿ ಬಹಳಷ್ಟು ಶ್ರಮವಹಿಸಿದ್ದಕ್ಕಾಗಿ ಇಲಾಖೆ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದರು. ಕಾರ್ಯಕ್ರಮದ ಉತ್ತಮ ಆಯೋಜನೆಗಾಗಿ ಅಂಗನವಾಡಿ ಕಾರ್ಯಕರ್ತೆಯರಾದ ಸಕೀನಾ, ಸಫಿಯಾರವರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆಯ ಅಧ್ಯಕ್ಷೆ ಧರಣಿ ಅವರು ಪಾಲ್ಗೊಂಡಿದ್ದರು.


ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ ಮತ್ತು ಸಿಹಿ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.