ADVERTISEMENT

ಸಂವಿಧಾನ ದೇಶದ ಜೀವನಾಡಿ: ಶಾಸಕ ಎ.ಎಸ್.ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 7:27 IST
Last Updated 27 ಜನವರಿ 2024, 7:27 IST
 ವಿರಾಜಪೇಟೆಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯವನ್ನು ಪ್ರದರ್ಶಿಸಿದರು.
 ವಿರಾಜಪೇಟೆಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯವನ್ನು ಪ್ರದರ್ಶಿಸಿದರು.   

ವಿರಾಜಪೇಟೆ: ‘ದೇಶದ ಜೀವನಾಡಿಯಾಗಿರುವ ಸಂವಿಧಾನವನ್ನು ಶಿಕ್ಷಕರು ಅರಿತು ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಕುರಿತು ಅರಿವು ಮೂಡಿಸಬೇಕು’ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಪ್ರಜಾವಾಣಿ ವಾರ್ತೆ

ಪಟ್ಟಣದ ತಾಲ್ಲೂಕು ಮೈದಾನದಲ್ಲಿ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT

‘ಬ್ರಿಟಿಷರ ಕಾನೂನು ಹಾಗೂ ನಮ್ಮ ಸಂವಿಧಾನವನ್ನು ಅವಲೋಕಿಸಿದಾಗ, ನಮ್ಮಲ್ಲಿ ಮುಖ್ಯವಾಗಿ ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಮೂಲಭೂತ ಹಕ್ಕಿನಿಂದ ಸಮಾನತೆ ಕಾಪಾಡಿಕೊಳ್ಳಬಹುದಾಗಿದೆ. ಅಧಿಕಾರಿಗಳಿಗೆ ಕಾನೂನಿನಲ್ಲಿರುವಂತೆ ಮಾತ್ರ ಅಧಿಕಾರ ಚಲಾಯಿಸಬಹುದು. ಆದರೆ, ನಾಗರಿಕರಿಗೆ ಎಲ್ಲಾ ರೀತಿಯ ಹಕ್ಕನ್ನು ಸಂವಿಧಾನ ನೀಡಿದೆ’ ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ್ ಎಚ್.ಎನ್.ರಾಮಚಂದ್ರ ಅವರು, ‘ವಿಶ್ವದ ದೊಡ್ಡ ಪ್ರಜಾಪ್ರಭುತ್ವ ಎನ್ನಿಸಿಕೊಂಡ ನಮ್ಮ ಸಂವಿಧಾನ ವಿಶಿಷ್ಠ. ಪ್ರಜ್ಞಾವಂತರಾಗಿ ಸಂವಿಧಾನ ಅರಿತು ಗೌರವಿಸುವ ಮೂಲಕ ಸದೃಢ ದೇಶ ಕಟ್ಟುವ ಕೆಲಸ ಮಾಡಬೇಕು. ಭ್ರಷ್ಟಚಾರ, ಶೋಷಣೆ, ಜಾತಿ ಧರ್ಮಗಳ ನಡುವಣ ಸಂಘರ್ಷ ಮೆಟ್ಟಿ ನಿಂತು ದೇಶ ಕಟ್ಟುವ ಸಂಕಲ್ಪ ನಾವು ಮಾಡಬೇಕಿದೆ’ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಕೊಡಗು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್, ಹಿರಿಯ ನಾಗರಿಕ ಸಮಿತಿ ಅಧ್ಯಕ್ಷ ಶಂಕರಿ ಪೊನ್ನಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ರಾಜೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

 ವಿರಾಜಪೇಟೆಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯವನ್ನು ಪ್ರದರ್ಶಿಸಿದರು.
ವಿರಾಜಪೇಟೆಯಲ್ಲಿ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.