ಮಡಿಕೇರಿ: ತಲಕಾವೇರಿಯಲ್ಲಿ ಇದೇ 17ರಂದು ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರು ಕೋವಿಡ್–19 ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ತಂದರೆ ಮಾತ್ರ ಅಂದು ಕ್ಷೇತ್ರಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.
ಭಾಗಮಂಡಲದಲ್ಲಿ ಶನಿವಾರ ಶಾಸಕ ಕೆ.ಜಿ.ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
‘ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಸ್ಥಳೀಯರು ತೀರ್ಥೋದ್ಭವದ ವೇಳೆ ಮುನ್ನೆಚ್ಚರಿಕೆ ವಹಿಸಬೇಕು. ಅಂತರ ಕಾಯ್ದುಕೊಂಡು ಕಾವೇರಿಯ ದರ್ಶನ ಮಾಡಬೇಕು. ಈ ವರ್ಷ ಜನದಟ್ಟಣೆಗೆ ಅವಕಾಶ ಇರುವುದಿಲ್ಲ. ಆದರೆ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಕೆ.ಜಿ.ಬೋಪಯ್ಯ ಹೇಳಿದರು.
‘ಭಾಗಮಂಡಲ, ತಲಕಾವೇರಿ ಕ್ಷೇತ್ರದಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ‘ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.