ADVERTISEMENT

ಕೊಡಗು: ಸೆ. 26ರಿಂದ ಅ. 9ರವರೆಗೆ ದಸರಾ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 11:37 IST
Last Updated 20 ಸೆಪ್ಟೆಂಬರ್ 2022, 11:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೆ. 26ರಿಂದ ಅ. 9ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಈಗಾಗಲೇ ಮಳೆ ಕಾರಣಕ್ಕೆ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರಜೆ ನೀಡಲಾಗಿದೆ. ಪ್ರತಿ ಶನಿವಾರ ಪೂರ್ಣ ತರಗತಿಗಳ ಮೂಲಕ ನೀಡಿರುವ ರಜೆಯನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ.

ಅ.2ರ ಮಹಾತ್ಮ ಗಾಂಧಿ ಜಯಂತಿ ಹಾಗೂ ಅ.9ರಂದು ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿ ಸೆ. 26ರಿಂದ ಅ. 9ರವರೆಗೆ ರಜೆ ಘೋಷಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT