ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 12:01 IST
Last Updated 13 ಅಕ್ಟೋಬರ್ 2018, 12:01 IST

ಮಡಿಕೇರಿ: ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಗಳಿಗೆ ನಡೆಯುವ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಸಂಬಂಧಿಸಿದ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಿ ಎಂದು ಸೂಚಿಸಿದರು.

ADVERTISEMENT

‘ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಂಸಿಸಿ ತಂಡಗಳು ಮೇಲ್ವಿಚಾರಣೆ ನೋಡಿಕೊಳ್ಳಬೇಕು. ಸಿ.ಸಿ ಕ್ಯಾಮೆರಾ ಅಳವಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಲ್. ಪ್ರವೀಣ್ ಕುಮಾರ್ ಮಾತನಾಡಿ, ‘ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಣ ಮಾಡಲು ಚುನಾವಣಾ ಆಯೋಗದ ಸೂಚನೆ ಪಾಲಿಸಬೇಕು. ಪಟ್ಟಣ ಪಂಚಾಯಿತಿವಾರು ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ಎಲ್ಲಾ ಚುನಾವಣಾ ಕರ್ತವ್ಯಗಳ ಸಂಪೂರ್ಣ ಮೇಲುಸ್ತುವಾರಿ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ವಿರಾಜಪೇಟೆ ತಹಶೀಲ್ದಾರ್ ಗೋವಿಂದರಾಜು, ಸೋಮವಾರಪೇಟೆ ತಹಶೀಲ್ದಾರ್ ಮಹೇಶ್, ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ್, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಾರ್ಲ್ಸ್ ಡಿಸೋಜ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಶಿವರಾಜು, ಎಚ್.ಪಿ. ಗಣೇಶ್, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.