ADVERTISEMENT

ಮುಳ್ಳೂರು: ಶಾಲೆಯಲ್ಲಿ ಹಸಿರು ದೀಪಾವಳಿ

ಬಣ್ಣ ಬಣ್ಣದ ದೀಪಗಳನ್ನು ಹಚ್ಚಿ ಸಂಭ್ರಮಿಸಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 16:07 IST
Last Updated 29 ಅಕ್ಟೋಬರ್ 2019, 16:07 IST
ಶನಿವಾರಸಂತೆ ಸಮೀಪದ ಮುಳ್ಳೂರು ಗ್ರಾಮದ ಶಾಲೆಯ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಿಸಿದರು
ಶನಿವಾರಸಂತೆ ಸಮೀಪದ ಮುಳ್ಳೂರು ಗ್ರಾಮದ ಶಾಲೆಯ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಿಸಿದರು   

ಶನಿವಾರಸಂತೆ: ಸಮೀಪದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರಸ್ನೇಹಿ ಹಸಿರು ದೀಪಾವಳಿ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ದೀಪಗಳನ್ನು ಹಚ್ಚಿ ಸಂಭ್ರಮಿಸಿದರು.

ಶಾಲೆಯ ಇಕೋ ಕ್ಲಬ್ ಸಂಚಾಲಕ ಶಿಕ್ಷಕ ಸಿ.ಎಸ್.ಸತೀಶ್ ಮಾತನಾಡಿ, ‘ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ಬಣ್ಣದ ಆಕಾಶ ಬುಟ್ಟಿಗಳನ್ನು ಮನೆಯಲ್ಲಿರಿಸಿ ಹಬ್ಬ ಆಚರಿಸಬೇಕು. ಪಟಾಕಿ ಹೊಡೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ’ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿಂದು ಸುರೇಶ್, ಸದಸ್ಯರಾದ ಗುಲಾಬಿ, ಕವಿತಾ, ಧರ್ಮಾವತಿ, ಆಶಾ ಕಾರ್ಯಕರ್ತೆ ರೂಪಾ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.